Monday, October 20, 2025

ಸತ್ಯ | ನ್ಯಾಯ |ಧರ್ಮ

ಇನ್ನೆಂಟು ತಿಂಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭ ಸಚಿವ ಕೃಷ್ಣಭೈರೇಗೌಡ ವಿಶ್ವಾಸ

ಹಾಸನ : ನಗರದ ಆರ್.ಸಿ. ರಸ್ತೆಯಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಹಣಕಾಸು ಕೊರತೆ ಎದುರಾಗುತ್ತಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ 64 ಕೋಟಿ ರೂ ಬಿಡುಗಡೆ ಮೂಲಕ ಹೆಚ್ಚುವರಿ ೯ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಕಾಮಗಾರಿಯ ಗತಿಗೆ ವೇಗ ಸಿಕ್ಕಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

  ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದಲ್ಲಿರುವ ಕಟ್ಟಡವನ್ನು ವೀಕ್ಷಣೆ ಮಾಡಿದಲ್ಲದೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ಪಡೆದುಕೊಂಡರು. ನಂತರ ಮಾಧ್ಯಮದೊಂದಿಗೆ ಮಾತನಾಡಿ, ನಿರ್ಮಾಣ ಹಂತದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಗೆ ಹಣಕಾಸು ಕೊರತೆ ಎದುರಾಗುತ್ತಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಹೆಚ್ಚುವರಿ ೯ ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಈಗಾಗಲೇ ಅನುಮೋದನೆಯಾಗಿದ್ದ ೬೪ ಕೋಟಿಗಳ ಯೋಜನೆಗೆ ಮತ್ತಷ್ಟು ಬಲ ದೊರಕಿದಂತಾಗಿದೆ. ಆಸ್ಪತ್ರೆಯ ಉಳಿದ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವ ಕ್ರಮ ಕೈಗೊಳ್ಳಲಾಗುತ್ತಿದೆ. ಎರಡನೇ ಹಂತದಲ್ಲಿ ಅಂತಿಮ ಸಿವಿಲ್ ಕಾಮಗಾರಿಗಳನ್ನು ಮಾಡಲಾಗುತ್ತದೆ. ಬಳಿಕ ಹೃದಯ ಸಂಬಂಧಿ ಚಿಕಿತ್ಸೆಗೆ ಅತ್ಯಾಧುನಿಕ ಕ್ಯಾಥ್ ಲ್ಯಾಬ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಆಸ್ಪತ್ರೆಗೆ ಅಗತ್ಯವಿರುವ ಸಿಬ್ಬಂದಿಯನ್ನು ಕೂಡಲೇ ನೇಮಕ ಮಾಡಲಾಗುತ್ತದೆ. ಎಲ್ಲಾ ಹಂತದ ಕೆಲಸಗಳನ್ನು ಒಟ್ಟೊಟ್ಟಿಗೆ ಮುಗಿಸುವ ಯೋಜನೆ ಹೊಂದಿದ್ದೇವೆ. ಕೆಲಸಗಳು ನಿರೀಕ್ಷೆಯಂತೆ ನಡೆದರೆ ಇನ್ನೂ ಏಳು, ಎಂಟು ತಿಂಗಳೊಳಗೆ ಆಸ್ಪತ್ರೆ ಕಾರ್ಯಾರಂಭವಾಗಲಿದೆ ಎಂದು ಭರವಸೆ ನೀಡಿದರು. ಸ್ಥಳೀಯ ಜನತೆಗೆ ದೀರ್ಘಕಾಲದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆ ಇದ್ದಿದ್ದು, ಈ ಯೋಜನೆ ಪೂರ್ಣಗೊಂಡರೆ ಹೃದಯ, ಕಿಡ್ನಿ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗೆ ಮೈಸೂರು ಅಥವಾ ಬೆಂಗಳೂರಿಗೆ ಹೋಗುವ ಅವಶ್ಯಕತೆ ಕಡಿಮೆಯಾಗಲಿದೆ ಎಂದರು.

  ಈ ಸಂದರ್ಭದಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಪಂ ಸಿಇಓ ಬಿ.ಆರ್. ಪೂರ್ಣಿಮಾ, ಎಸ್ಪಿ ಮೊಹಮ್ಮದ್ ಸುಜೀತಾ, ಹಿಮ್ಸ್ ನಿರ್ದೇಶಕ ಡಾ. ರಾಜಣ್ಣ,  ಮಾಜಿ ಎಂ.ಎಲ್.ಸಿ. ಎಂ.ಎ. ಗೋಪಾಲಸ್ವಾಮಿ, ಕಾಂಗ್ರೆಸ್ ಮುಖಂಡರಾದ ಹೆಚ್.ಕೆ. ಮಹೇಶ್, ಮಧುಸೂದನ್, ಪಟೇಲ್ ಶಿವಪ್ಪ ಹಾಗೂ ಆಸ್ಪತ್ರೆ ಕಾಮಗಾರಿ ಸ್ಥಳ ಪರಿಶೀಲನೆ ವೇಳೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರ ಜೊತೆ ಇದ್ದು ಮಾಹಿತಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page