Friday, June 14, 2024

ಸತ್ಯ | ನ್ಯಾಯ |ಧರ್ಮ

ಡೈನಾಮಿಕ್ ಸ್ಟಾರ್ ದೇವರಾಜ್ ಹುಟ್ಟುಹಬ್ಬ, ಉಸಿರೇ ಉಸಿರೇ ಸೆಟ್ ನಲ್ಲಿ ಆಚರಣೆ

ಪ್ರದೀಪ್ ಯಾದವ್ ನಿರ್ಮಾಣದ “ಉಸಿರೇ ಉಸಿರೇ” ಚಿತ್ರದಲ್ಲಿ  ಡೈನಾಮಿಕ್ ಸ್ಟಾರ್ ದೇವರಾಜ್ ವಿಭಿನ್ನ ಗೆಟಪ್ ನೊಂದಿಗೆ, ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಪೋಷಕ ನಟರಾಗಿ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರೂ, ದೇವರಾಜ್ ಅವರು ಈ ಚಿತ್ರದಲ್ಲಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಲುತ್ತಿದ್ದಾರೆ. ಹಾಗಾಗಿ ಈ ಚಿತ್ರದ ಬಗ್ಗೆ ಚಿತ್ರೋದ್ಯಮದಲ್ಲಿ ಸಾಕಷ್ಟು ಕುತೂಹಲ ಇದೆ.

ಇತ್ತೀಚೆಗೆ “ಉಸಿರೇ ಉಸಿರೇ” ಚಿತ್ರತಂಡದಿಂದ ದೇವರಾಜ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ “ಉಸಿರೇ ಉಸಿರೇ” ಚಿತ್ರದಲ್ಲಿನ ದೇವರಾಜ್ ರವರ ವಿಭಿನ್ನ ಪಾತ್ರದಲ್ಲಿನ ಪೋಸ್ಟರ್ ಮತ್ತು ಮೇಕಿಂಗ್ ವಿಡಿಯೋ ಒಂದನ್ನು ಬಿಡುಗಡೆ ಮಾಡಲಾಯಿತು.

 “ಬಿಗ್ ಬಾಸ್” ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ  ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿ ಈ ಚಿತ್ರದ ಸಂಗೀತ ನಿರ್ದೇಶಕರು.

ಇದನ್ನೂ ನೋಡಿ: https://www.youtube.com/watch?v=EJYaR7Nlz3Q

Related Articles

ಇತ್ತೀಚಿನ ಸುದ್ದಿಗಳು