Monday, October 20, 2025

ಸತ್ಯ | ನ್ಯಾಯ |ಧರ್ಮ

ಯೆಮೆನ್‌ ದೇಶದಲ್ಲಿ ಇಸ್ರೇಲ್ ಭಾರೀ ವಾಯುದಾಳಿ: 35 ಸಾವು, 130ಕ್ಕೂ ಹೆಚ್ಚು ಜನರಿಗೆ ಗಾಯ

ಸನಾ (ಯೆಮೆನ್): ಯೆಮೆನ್‌ನ ಮೇಲೆ ಬುಧವಾರ ಇಸ್ರೇಲ್ ಮತ್ತೊಂದು ಸುತ್ತಿನ ಭಾರೀ ವಾಯುದಾಳಿ ನಡೆಸಿದ್ದು, ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಮತ್ತು 130ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೌತಿ ಅಧಿಕಾರಿಗಳು ತಿಳಿಸಿದ್ದಾರೆ. ಹೌತಿ ಬಂಡುಕೋರರು ಇಸ್ರೇಲಿ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆಸಿದ ಕೆಲವೇ ದಿನಗಳ ನಂತರ ಈ ದಾಳಿ ನಡೆದಿದೆ.

ಹೌತಿ ನಿಯಂತ್ರಿತ ಆರೋಗ್ಯ ಸಚಿವಾಲಯದ ಪ್ರಕಾರ, ಈ ದಾಳಿಯಲ್ಲಿ ಕನಿಷ್ಠ 35 ಜನರು ಸಾವನ್ನಪ್ಪಿದ್ದು, 130ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಜಧಾನಿ ಸನಾದಲ್ಲಿ ಹೆಚ್ಚಿನ ಸಾವು-ನೋವುಗಳು ಸಂಭವಿಸಿವೆ. ಮಿಲಿಟರಿ ಪ್ರಧಾನ ಕಚೇರಿ ಮತ್ತು ಇಂಧನ ಕೇಂದ್ರವು ಹಾನಿಗೊಳಗಾಗಿವೆ.

ದಾಳಿಯಿಂದಾಗಿ ಅವಶೇಷಗಳ ಅಡಿಯಲ್ಲಿ ಸಿಲುಕಿದ ಜನರನ್ನು ಶೋಧಿಸುವ ಕಾರ್ಯ ಮುಂದುವರೆದಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page