Thursday, September 11, 2025

ಸತ್ಯ | ನ್ಯಾಯ |ಧರ್ಮ

ಯುವತಿ ಜೊತೆ ಅಸಭ್ಯ ವರ್ತನೆ: ಬಸ್ ಚಾಲಕನಿಗೆ ಬೆತ್ತಲೆಗೊಳಿಸಿ ಥಳಿತ

ಬೆಂಗಳೂರು, ಸೆ.11: ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ, ಚಾಲಕನನ್ನು ಅರೆ ಬೆತ್ತಲೆಗೊಳಿಸಿ ಥಳಿಸಿರುವ ಘಟನೆ ನಡೆದಿದೆ.

ನಗರದಲ್ಲಿ ವಾಸವಾಗಿರುವ 15 ವರ್ಷದ ಯುವತಿಯೊಬ್ಬಳು ಹೈದರಾಬಾದ್‌ನಲ್ಲಿರುವ ತನ್ನ ಅಕ್ಕನ ಮನೆಗೆ ಹೋಗಿ, ರಾತ್ರಿ ಸ್ಲೀಪರ್‌ಕೋಚ್ ಬಸ್ ಮೂಲಕ ಬೆಂಗಳೂರಿಗೆ ಹಿಂತಿರುಗುತ್ತಿದ್ದಳು. ಪ್ರಯಾಣದ ಮಧ್ಯೆ ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ, ಚಾರ್ಜ್ ಹಾಕುವಂತೆ ಚಾಲಕನಿಗೆ ಮೊಬೈಲ್ ಕೊಟ್ಟಿದ್ದಳು. ಸ್ವಲ್ಪ ಸಮಯದ ನಂತರ ಮೊಬೈಲ್ ತೆಗೆದುಕೊಳ್ಳಲು ಹೋದಾಗ, ಚಾಲಕ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

ಯುವತಿ ವಿರೋಧ ವ್ಯಕ್ತಪಡಿಸಿದರೂ, ಆಕೆ ಮಲಗಿದ್ದ ಸೀಟ್ ಬಳಿ ಪದೇ ಪದೇ ಬಂದು ಚಾಲಕ ಕಿರುಕುಳ ನೀಡಿದ್ದಾನೆ. ಇದರಿಂದ ಹೆದರಿದ ಯುವತಿ ತನ್ನ ತಾಯಿಗೆ ಕರೆ ಮಾಡಿ ಘಟನೆಯ ಬಗ್ಗೆ ತಿಳಿಸಿದ್ದಾಳೆ.

ಈ ಬಸ್ ಇಂದು ಬೆಳಗ್ಗೆ ನಗರದ ಬಸವೇಶ್ವರ ವೃತ್ತದ ಬಳಿ ಬರುತ್ತಿದ್ದಂತೆ, ಯುವತಿಯ ತಾಯಿ ಮತ್ತು ಸಹೋದರ ಅಲ್ಲಿಗೆ ಬಂದು ಚಾಲಕನನ್ನು ಬಸ್‌ನಿಂದ ಹೊರಗೆ ಎಳೆದು, ಅರೆ ಬೆತ್ತಲೆಗೊಳಿಸಿ ಥಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಹೈಗ್ರೌಂಡ್ ಠಾಣೆ ಪೊಲೀಸರು ಘಟನೆಯ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page