Wednesday, September 17, 2025

ಸತ್ಯ | ನ್ಯಾಯ |ಧರ್ಮ

ಕೇಳಿದಷ್ಟು ಸೀಟುಗಳನ್ನು ನೀಡದಿದ್ದರೆ ಎನ್‌ಡಿಎಗೆ ಗುಡ್‌ಬೈ: ಬಿಹಾರ ಚುನಾವಣೆಗೂ ಮುನ್ನಾ ಚಿರಾಗ್ ಪಾಸ್ವಾನ್ ಎಚ್ಚರಿಕೆ

ದೆಹಲಿ: ಈ ವರ್ಷದ ಕೊನೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಬಿಜೆಪಿ-ಜೆಡಿಯು ಮೈತ್ರಿಕೂಟಕ್ಕೆ ಕೇಂದ್ರದಲ್ಲಿ ಎನ್‌ಡಿಎ ಪಾಲುದಾರ ಪಕ್ಷವಾದ ಎಲ್‌ಜೆಪಿ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಮತ್ತೊಮ್ಮೆ ಆಘಾತ ನೀಡಿದ್ದಾರೆ.

ತಮಗೆ ಮತದಾರರನ್ನು ಪ್ರಭಾವಿಸುವ ಶಕ್ತಿ ಇದೆ ಎಂದು ಅವರು ಮಂಗಳವಾರ ರಾಷ್ಟ್ರೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಮೈತ್ರಿಕೂಟಕ್ಕೆ ನೆನಪಿಸಿದರು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 20,000 ದಿಂದ 25,000 ಮತಗಳನ್ನು ನಾನು ಪ್ರಭಾವಿಸಬಲ್ಲೆ ಎಂದು ಚಿರಾಗ್ ಹೇಳಿದರು.

ಒಟ್ಟು 243 ವಿಧಾನಸಭಾ ಸ್ಥಾನಗಳಲ್ಲಿ ತಮ್ಮ ಪಕ್ಷಕ್ಕೆ ಗಣನೀಯ ಪಾಲು ಬೇಕೆಂದು ಚಿರಾಗ್ ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಅವರ ಪಕ್ಷವು ಐದು ಸ್ಥಾನಗಳಲ್ಲಿ ಸ್ಪರ್ಧಿಸಿ ಐದನ್ನೂ ಗೆದ್ದಿತ್ತು.

ಬಾರಿ ವಿಧಾನಸಭಾ ಚುನಾವಣೆಯಲ್ಲಿ ತಮಗೆ 40 ಸ್ಥಾನಗಳನ್ನು ಹಂಚಿಕೆ ಮಾಡಬೇಕೆಂದು ಚಿರಾಗ್ ಬೇಡಿಕೆ ಇಡುತ್ತಿದ್ದಾರೆ ಎಂದು ಮಾಹಿತಿ ಇದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಅಥವಾ ತಮಗೆ ತೊಂದರೆಯಾದರೆ, ಮೈತ್ರಿಕೂಟದಿಂದ ಹೊರಬರಲು ತಾವು ಹಿಂಜರಿಯುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page