Monday, September 22, 2025

ಸತ್ಯ | ನ್ಯಾಯ |ಧರ್ಮ

ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ಪತ್ನಿ ಡಿಜಿಟಲ್ ಅರೆಸ್ಟ್‌; 14 ಲಕ್ಷ ಕಳೆದುಕೊಂಡ ಪ್ರಕರಣ ತಡವಾಗಿ ಬೆಳಕಿಗೆ

ಚಿಕ್ಕಬಳ್ಳಾಪುರ ಸಂಸದ ಡಾ.ಕೆ ಸುಧಾಕರ್ ಪತ್ನಿ ಡಾ. ಪ್ರೀತಿ ಸುಧಾಕರ್ ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಸೈಬರ್ ವಂಚನೆಯಿಂದ ಕಣ್ಮುಚ್ಚಿ ಬಿಡುವುದರಲ್ಲಿ 14 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಆದರೆ ಈ ವಂಚನೆ ಆಗಸ್ಟ್ 26 ರಂದೇ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಆಗಸ್ಟ್ 26ರಂದು ಡಾ. ಪ್ರೀತಿ ಸುಧಾಕರ್ ಬೆಳಿಗ್ಗೆ 9:30ಕ್ಕೆ ಕರೆ ಬಂದಿತ್ತು. ನಾವು ಮುಂಬೈ ಸೈಬರ್ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ. ನಿಮ್ಮ ದಾಖಲೆಗಳನ್ನ ಸದ್ಭತ್ ಖಾನ್ ಎಂಬ ಅಪರಿಚಿತ ಬಳಸಿಕೊಂಡಿದ್ದಾನೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾನೆ ಎಂದು ಕರೆಯ ಮೂಲಕ ವಂಚಿಸಿದ್ದಾನೆ.

ಸದ್ಯಕ್ಕೆ ಸದ್ಬತ್ ಖಾನ್‌ರನ್ನು ಅರೆಸ್ಟ್ ಮಾಡಲಾಗಿದ್ದು, ಆತನ ಹೇಳಿಕೆಯಲ್ಲಿ ನಿಮ್ಮ ಹೆಸರಿನ ದಾಖಲೆಯಿದೆ. ಇದರ ವಿಚಾರಣೆ ನಡೆಸೋದಕ್ಕೆ ವಿಡಿಯೋ ಕಾಲ್ ಮಾಡುತ್ತಿದ್ದೇವೆ. ನಿಮ್ಮ ದಾಖಲೆ ಹಾಗೂ ವೈಯಕ್ತಿಕ ದಾಖಲೆಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ವಂಚಕ ಡಾ.ಪ್ರೀತಿ ಸುಧಾಕರ್ ಗೆ ಹೇಳಿದ್ದಾನೆ.

ತಕ್ಷಣವೇ ಗಲಿಬಿಲಿಗೊಂಡ ಪ್ರೀತಿ ಸುಧಾಕರ್ ವಂಚಕ ಹೇಳಿದ ದಾಖಲೆ ನೀಡಿದ ಪರಿಣಾಮ ಏಕಾಏಕಿ 14 ಲಕ್ಷ ರೂಪಾಯಿ ಕಣ್ಮುಚ್ಚಿ ಬಿಡುವುದರಲ್ಲಿ ಕಾಣೆಯಾಗಿದೆ.

ಆರ್ ಬಿ ಐ ರೂಲ್ಸ್ ಪರಿಶೀಲನೆ ಮಾಡಿ 45 ನಿಮಿಷದಲ್ಲಿ ವಾಪಸ್ ಹಾಕೋದಾಗಿ ವಂಚಕ ತಿಳಿಸಿದ್ದಾನೆ. ಪ್ರೀತಿ ಸುಧಾಕರ್ ಇಂದ 14 ಲಕ್ಷ ಹಣವನ್ನ ವಂಚಕರು ಆರ್‌ಟಿಜಿಎಸ್‌ ಮಾಡಿಸಿಕೊಂಡಿದ್ದಾರೆ. ಹಣ ಹಾಕಿದ ನಂತರ ಮೋಸದ ಜಾಲಕ್ಕೆ ಬಿದ್ದಿರುವುದು ಪತ್ತೆಯಾಗಿದೆ. ಪ್ರೀತಿ ಸುಧಾಕರ್ ನೀಡಿದ ದೂರಿನ ಮೇರೆಗೆ ಸೈಬರ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page