Wednesday, September 24, 2025

ಸತ್ಯ | ನ್ಯಾಯ |ಧರ್ಮ

ಸಕಲೇಶಪುರ : ಗುತ್ತಿಗೆದಾರರ ನಿರ್ಲಕ್ಷ್ಯ ಆನೆಮಹಲ್ ಬಳಿ ರಸ್ತೆ ಅಪಘಾತ

ಸಕಲೇಶಪುರ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಕಾರುಗಳಿಗೆ ವ್ಯಾಪಕ ಹಾನಿಯಾಗಿರುವ ಘಟನೆ ತಾಲ್ಲೂಕಿನ ಆನೆಮಹಲ್ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಆನೆಮಹಲ್ ಸಮೀಪ ರಾಷ್ಟ್ರಿಯ ಹೆದ್ದಾರಿ 75ರಲ್ಲಿ ಮಂಗಳೂರು ಕಡೆಯಿಂದ ಬರುತ್ತಿದ್ದ ಉಡುಪಿ ಮೂಲದವರ ಕಾರು ಹಾಗೂ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ಕಾರುಗಳು ತೀವ್ರ ಜಖಂಗೊಂಡಿದೆ. ಅದೃಷ್ಟವಷಾತ್ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೆ ದೊಡ್ಡ ಹಾನಿ ಸಂಭವಿಸಿಲ್ಲ. ಕಾರುಗಳು ಪಲ್ಟಿ ಹೊಡೆದ ಪರಿಣಾಮ ವ್ಯಾಪಕ ಹಾನಿ ಕಾರುಗಳಿಗೆ ಸಂಭವಿಸಿದೆ.

ಗುತ್ತಿಗೆದಾರರ ನಿರ್ಲಕ್ಷ್ಯ ಅಪಘಾತಕ್ಕೆ ಕಾರಣ: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಏಕಾಏಕಿ ಮಂಗಳೂರು ಕಡೆಯಿಂದ ಬರುವ ವಾಹನಗಳ ಪಥದ ಸಂಚಾರವನ್ನು ರದ್ದು ಮಾಡಿ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳನ್ನು ಯಾವುದೆ ಮುಂಜಾಗ್ರತ ಕ್ರಮ ಕೈಗೊಳ್ಳದೆ ಏಕ ಪಥದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರಿಂದ ಈ ರೀತಿಯ ಘಟನೆ ಸಂಭವಿಸಿದೆ.ಗುತ್ತಿಗೆದಾರರು ಕಾಮಗಾರಿ ಮಾಡುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ.ಇಲ್ಲದಿದ್ದಲ್ಲಿ ಈ ರೀತಿಯ ಘಟನೆಗಳು ಪದೇ ಪದೇ ನಡೆಯುವ ಸಾಧ್ಯತೆಗಳು ಹೆಚ್ಚಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page