Wednesday, September 24, 2025

ಸತ್ಯ | ನ್ಯಾಯ |ಧರ್ಮ

ಸಕಲೇಶಪುರ : ಅಕ್ರಮ ಮರ ಸಾಗಾಟ ಪತ್ತೆ ಅರಣ್ಯ ಇಲಾಖೆಯ ದಾಳಿ

ಸಕಲೇಶಪುರ: ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ವಿವಿಧ ಜಾತಿಯ ಮರಗಳನ್ನು ವಶಪಡಿಸಿಕೊಂಡಿದ್ದಾರೆ.

ಹಾಸನದ ಕಡೆಯಿಂದ ಮಂಗಳೂರು ಕಡೆಗೆ ಎರಡು ಗೂಡ್ಸ್ ವಾಹನಗಳಲ್ಲಿ ತರಕಾರಿ ಸಾಗಾಟ ಮಾಡುವಂತೆ ಟಾರ್ಪಲ್ ಕಟ್ಟಿಕೊಂಡು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಸುಮಾರು 7 ಟನ್ ಮರಗಳು, ಎರಡು ವಾಹನಗಳು ಹಾಗೂ ಇಬ್ಬರು ಚಾಲಕರನ್ನು ವಶಕ್ಕೆ ಪಡೆದಿದ್ದಾರೆ.

ಆರ್‌ಎಫ್‌ಓ ಹೇಮಂತ್‌ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಕಳೆದ ಒಂದು ವಾರದಲ್ಲಿ ಒಟ್ಟು ಐದು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗೆ ಅಕ್ರಮ ಮರ ಸಾಗಾಟ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗಸ್ತು ಬಿಗಿಗೊಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page