Thursday, September 25, 2025

ಸತ್ಯ | ನ್ಯಾಯ |ಧರ್ಮ

ಧರ್ಮಸ್ಥಳ ಅನ್ಯಾಯದ ವಿರುದ್ಧ ಬೆಂಗಳೂರಿನಲ್ಲಿ ‘ನ್ಯಾಯ ಸಮಾವೇಶ’

ಬೆಂಗಳೂರು, ಪ್ರೀಡಂ ಪಾರ್ಕ್: ಧರ್ಮಸ್ಥಳದಲ್ಲಿ ನಡೆದ ದೌರ್ಜನ್ಯ, ಅತ್ಯಾಚಾರ ಮತ್ತು ಅಕ್ರಮಗಳ ವಿರುದ್ಧ ವಿವಿಧ ಹೋರಾಟಗಾರರು, ಸಾಹಿತಿಗಳು ಹಾಗೂ ನಾಯಕರು ಸೆಪ್ಟೆಂಬರ್ 25, 2025ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ನ್ಯಾಯ ಸಮಾವೇಶ’ ಆಯೋಜಿಸಿದ್ದರು. ಈ ಸಮಾವೇಶದಲ್ಲಿ ಭಾಗವಹಿಸಿದವರು ಈ ಘಟನೆಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದರು ಮತ್ತು ಸರ್ಕಾರಕ್ಕೆ ತನಿಖೆ ನಡೆಸುವಂತೆ ಆಗ್ರಹಿಸಿದರು.

ಹೋರಾಟಗಾರರ ಪ್ರಮುಖ ಆಗ್ರಹಗಳು

ವಿಮಲಾ (ಹೋರಾಟಗಾರರು): ಇದು ಅಧರ್ಮದ ವಿರುದ್ಧದ ಧರ್ಮಯುದ್ಧ. ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಯಲಿದೆ. ಧರ್ಮಸ್ಥಳದಲ್ಲಿ ನಡೆದ ದೌರ್ಜನ್ಯ, ಅತ್ಯಾಚಾರ ಮತ್ತು ಅಕ್ರಮಗಳಿಗೆ ಲೆಕ್ಕ ಚುಕ್ತಾ ಆಗಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ. 2025ರವರೆಗೆ ಧರ್ಮಸ್ಥಳದಲ್ಲಿ ನಡೆದ ಎಲ್ಲಾ ಸಾವುಗಳ ತನಿಖೆ ನಡೆಯಬೇಕು ಮತ್ತು ಎಸ್‌ಐಟಿ ತನಿಖೆಗೆ ಮುಕ್ತ ಅವಕಾಶ ನೀಡಬೇಕು.

ಸುಭಾಷಿಣಿ ಅಲಿ (ಮಾಜಿ ಸಂಸದೆ): ಧರ್ಮಸ್ಥಳದಲ್ಲಿ ದಲಿತರ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ. ಅಲ್ಲಿರುವ ವ್ಯವಸ್ಥೆ ಮನುಸ್ಮೃತಿಯ ಆಧಾರದ ಮೇಲೆ ನಿಂತಿದೆ. ಅತ್ಯಾಚಾರ ಮತ್ತು ಕೊಲೆಗಳನ್ನು ಖಂಡಿಸಿದರೆ ಜೀವಬೆದರಿಕೆ ಹಾಕಲಾಗುತ್ತಿದೆ.

ಡಾ. ಎಸ್.ಜಿ. ಸಿದ್ದರಾಮಯ್ಯ (ಸಾಹಿತಿಗಳು): ಈ ಹೋರಾಟವು ಧರ್ಮ, ದೇವರು ಅಥವಾ ದೇವಾಲಯದ ವಿರುದ್ಧ ಅಲ್ಲ, ಆದರೆ ನಮ್ಮ ಪ್ರಶ್ನೆಗಳಿಗೆ ಉತ್ತರಿಸುವ ಜವಾಬ್ದಾರಿ ಧರ್ಮಾಧಿಕಾರಿಯ ಮೇಲಿದೆ. ಭಕ್ತರ ಬಗ್ಗೆ ಅವರಿಗೆ ಕಾಳಜಿ ಇಲ್ಲವೇ? ಅಲ್ಲದೆ, ರಾಜಕಾರಣಿಗಳನ್ನು ಪ್ರಶ್ನಿಸಿದ ಅವರು, “ಹೆಣ್ಣುಮಕ್ಕಳನ್ನು ಕೊಂದವರು ಯಾರು? ಉತ್ತರ ಕೊಡಿ” ಎಂದು ಆಗ್ರಹಿಸಿದರು. ಹೆಗ್ಗಡೆಗಳು ಕೇವಲ ದೇವಸ್ಥಾನದ ಉಸ್ತುವಾರಿ ನೋಡಿಕೊಂಡು ಆದಾಯ ಪಡೆಯುತ್ತಿದ್ದಾರೆ ಹೊರತು, ಅವರಿಗೆ ದೇವರು ಅಥವಾ ಭಕ್ತರೊಂದಿಗೆ ಯಾವುದೇ ಸಂಬಂಧವಿಲ್ಲ.

ಬಾಲನ್‌ (ವಕೀಲರು): ಪದ್ಮಲತಾ ಪ್ರಕರಣ ಮತ್ತೆ ತೆರೆಯಲಿದೆ. ವೇದವಲ್ಲಿ, ಸೌಜನ್ಯ, ಮತ್ತು ಪದ್ಮಲತಾ ನ್ಯಾಯ ಸಿಗುವವರೆಗೂ ಉರಿಯುವ ಬೆಂಕಿಯಂತೆ ಇರುತ್ತಾರೆ. ‘ಉಪ್ಪು ತಿಂದವರು ನೀರು ಕುಡಿಯಲೇಬೇಕು’.

ಮಾವಳ್ಳಿ ಶಂಕರ್ (ದಲಿತ ನಾಯಕರು): “ಎದ್ದೇಳು ಮಂಜುನಾಥ, ಕೊನೆಗಾಲ ಬರುತ್ತಿದೆ” ಎಂದು ಘೋಷಿಸಿದ ಅವರು, ಜಗದ್ಗುರುಗಳು ಮತ್ತು ದೇವಾಂಶ ಸಂಭೂತರು ಜನರಿಂದ ಆಯ್ಕೆಯಾದ ಸರ್ಕಾರದ ಮೇಲೆ ಧಾರ್ಮಿಕ ಸಂಸ್ಥಾನವನ್ನು ಹೇರಲು ಪಿತೂರಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಮಂತ್ರಿಗಳು ಯಾರು ಆಗಬೇಕು ಎಂದು ಅವರೇ ನಿರ್ಧರಿಸಿದರೆ, ಜನಸಾಮಾನ್ಯರು ಮತ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page