Monday, June 17, 2024

ಸತ್ಯ | ನ್ಯಾಯ |ಧರ್ಮ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ 2022 ಮಂಡನೆ

ಬೆಂಗಳೂರು: ರಾಜ್ಯ ಸರ್ಕಾರದ ಅಧೀನ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ಎಸ್‌ಎಸ್‌ಎಲ್‌ಸಿ ವರೆಗೆ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಧ್ಯಯನ ಮಾಡಿ, ಉತ್ತೀರ್ಣರಾಗಿರುವುದನ್ನು ಕಡ್ಡಾಯಗೊಳಿಸುವ ಕುರಿತು ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ 2022 ನ್ನು ವಿಧಾನಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಸದನದಲ್ಲಿ ಮಸೂದೆಯನ್ನು ಮಂಡಿಸಿದರು ಮಂಡಿಸಿದರು.

ಕನ್ನಡವನ್ನು ಅಧಿಕೃತ ರಾಜ್ಯ ಭಾಷೆ ಎಂದು ತೀರ್ಮಾನಿಸುವ ಪ್ರಸ್ತಾವ ಈ ಮಸೂದೆಯಲ್ಲಿದೆ. ಒಬ್ಬ ವ್ಯಕ್ತಿ ಅಥವಾ ಆತನ ಪೋಷಕರು 15 ವರ್ಷಗಳಿಂದ ಕರ್ನಾಟಕದಲ್ಲಿ ನೆಲೆಸಿದ್ದಲ್ಲಿ, ಅವರಿಗೆ ಕನ್ನಡ ಓದಲು ಹಾಗೂ ಬರೆಯಲು ಬರುತ್ತಿದ್ದಲ್ಲಿ ಆತ ಕನ್ನಡಿಗ” ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.

ಏನಿದೆ ಮಸೂದೆಯಲ್ಲಿ

ಕನ್ನಡ ಬಳಕೆ ಉಲ್ಲಂಘಿಸಿದರೆ 20 ಸಾವಿರರುಗಳ ದಂಡ

ಕನ್ನಡ ಭಾಷೆಯ ಬಳಕೆ ವಿಚಾರದಲ್ಲಿ ನಿಯಮ ಉಲ್ಲಂಘನೆಗೆ 20,000 ದವರೆಗೂ ದಂಡ.

ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯ ಬಳಕೆಗೆ ಉತ್ತೇಜನ.

ಎಸ್ಎಸ್ಎಲ್‌ಸಿವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ಕಲಿಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡ್ಡಾಯ.

ಎಸ್ಎಸ್ಎಲ್‌ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಉನ್ನತ ಶಿಕ್ಷಣ, ತಾಂತ್ರಿಕ ಶಿಕ್ಷಣ ಮತ್ತು ವೃತ್ತಿಪರ ಶಿಕ್ಷಣದಲ್ಲಿ ಮೀಸಲಾತಿ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು, ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ಕಡೆಗಳಲ್ಲಿ ಕನ್ನಡ ಭಾಷೆಯ ಪ್ರಚಾರಕ್ಕೆ ಉತ್ತೇಜನ.

ಇ- ಆಡಳಿತ ಮತ್ತು ಇ-ಟೆಂಡರ್ ಪ್ರಕ್ರಿಯೆಯಲ್ಲಿ ಕನ್ನಡದ ಬಳಕೆ.

ಕನ್ನಡಿಗರಿಗೆ ನಿಗದಿತ ಪ್ರಮಾಣದ ಉದ್ಯೋಗ ನೀಡುವ ಉದ್ದಿಮೆಗಳಿಗೆ ಜಮೀನು ಮಂಜೂರಾತಿ ಮತ್ತು ತೆರಿಗೆ ರಿಯಾಯಿತಿ

ಇದನ್ನೂ ನೋಡಿ: https://www.youtube.com/watch?v=B6oAtXdzn-0

Related Articles

ಇತ್ತೀಚಿನ ಸುದ್ದಿಗಳು