Friday, October 3, 2025

ಸತ್ಯ | ನ್ಯಾಯ |ಧರ್ಮ

ವಿದ್ಯಾರ್ಥಿ ಯಲ್ಲಾಲಿಂಗ ಕೊ*ಲೆ ಪ್ರಕಟರಣ ಎಲ್ಲಾ ಆರೋಪಿಗಳು ಖುಲಾಸೆ

ಕೊಪ್ಪಳ : ವಿದ್ಯಾರ್ಥಿ (Student) ಯಲ್ಲಾಲಿಂಗ ಕೊ*ಲೆ ಪ್ರಕರಣದ (Case) ಅಂತಿಮ ತೀರ್ಪು (Verdict) ಪ್ರಕಟವಾಗಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆ ಮಾಡಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ (Court) ತೀರ್ಪು ನೀಡಲಾಗಿದೆ. ಹತ್ತು ವರ್ಷದ ನಂತರ ಪ್ರಕಟವಾದ ಕೊಪ್ಪಳದ ಕನಕಾಪೂರದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಕೇಸ್ ದೇಶದಲ್ಲಿ ಸದ್ದು ಮಾಡಿತ್ತು. ಇದೀಗ ಯಲ್ಲಾಲಿಂಗ ಪ್ರಕರಣದ ತೀರ್ಪು ಕೊನೆಗೂ ಪ್ರಕಟವಾಗಿದೆ. ಕೊಪ್ಪಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ ಚಂದ್ರಶೇಖರ್ ಅವರು ತೀರ್ಪು ಪ್ರಕಟಿಸಿದ್ದಾರೆ. ಸಾಕ್ಷಿಗಳ ಕೊರತೆ ಕಾರಣಕ್ಕೆ ಪ್ರಕರಣದ ಎಲ್ಲ ಆರೋಪಿಗಳನ್ನು ಖುಲಾಸೆ ಮಾಡಿದ್ದಾರೆ.

ಏನಿದು ಪ್ರಕರಣ?
ಕನಕಗಿರಿ ತಾಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮೂರಿನಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದ. ಈ ಬೆಳವಣಿಗೆ ಬೆನ್ನಲ್ಲೇ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಕೊಲೆ ನಡೆದಿತ್ತು.ಅಂದಿನ ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ ನಾಯಕ ಸೇರಿ 9 ಜನರ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಸಚಿವ ಶಿವರಾಜ ತಂಗಡಗಿ ಸಂಪುಟದಿಂದ ಕೈ ಬಿಡುವಂತೆ ಆಗಿತ್ತು. ಆದರೆ, ಇದೀಗ ಪ್ರಕರಣದ ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ.

ಯಲ್ಲಾಲಿಂಗ ಯಾರು?
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಕನಕಾಪೂರ ನಿವಾಸಿ. ತಮ್ಮ ಗ್ರಾಮದ ಸಮಸ್ಯೆಯನ್ನು ಖಾಸಗಿ ವಾಹಿನಿ ಮುಂದೆ ಹೇಳಿದ್ದಕ್ಕೆ ಯಲ್ಲಾಲಿಂಗನ ಹತ್ಯೆ ಮಾಡಲಾಗಿತ್ತು. ಮಾಜಿ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ ಮತ್ತು ಅವರ ಮಗ ಮಹಾಂತೇಶ ನಾಯಕ ಸೇರಿ 9 ಜನರ ಮೇಲೆ ಕೊಲೆ ಆರೋಪ ಕೇಳಿಬಂದಿತ್ತು. ಕೊಪ್ಪಳ ರೈಲು ನಿಲ್ದಾಣದಲ್ಲಿ ಯಲ್ಲಾಲಿಂಗನ ಪ್ರಾಣ ಹೋಗಿತ್ತು. ಆ ಸಮಯದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು ಶಿವರಾಜ್ ತಂಗಡಗಿ. ಜಿಲ್ಲೆಯಲ್ಲಿ ಹಲವು ಪ್ರತಿಭಟನೆಗಳಿಗೂ ಈ ಕೊಲೆ ಪ್ರಕರಣ ಕಾರಣವಾಗಿತ್ತು.ಹನುಮೇಶ್ ನಾಯಕ ಬಂಧನಕ್ಕೆ ಆಗ್ರಹಿಸಿ ಬಿಜೆಪಿ‌ ನಾಯಕರು ಜಿಲ್ಲೆಗೆ ಬಂದಿದ್ದರು. ಅಂದು ಬಿ.ಎಸ್.ಯಡಿಯೂರಪ್ಪ ಕೊಪ್ಪಳ ಜಿಲ್ಲೆಗೆ ಬಂದು ಹನುಮೇಶ್ ನಾಯಕನ ಬಂಧನಕ್ಕೆ ಮತ್ತು ಶಿವರಾಜ್ ತಂಗಡಗಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದರು. ಕೊನೆಗೆ ಸಿದ್ದರಾಮಯ್ಯ ಸರ್ಕಾರ ಯಲ್ಲಾಲಿಂಗ ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ಒಪ್ಪಿಸಿತ್ತು. ಶಿವರಾಜ ತಂಗಡಗಿ ರಾಜೀನಾಮೆ ಕೊಡಬೇಕಾಯ್ತು. ಹನುಮೇಶ್ ನಾಯಕ ಸೇರಿ 9 ಜನ ಈ

Related Articles

ಇತ್ತೀಚಿನ ಸುದ್ದಿಗಳು

You cannot copy content of this page