ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

2 ಲಕ್ಷ ಬಿಪಿಎಲ್ ಕಾರ್ಡ್‌ಗಳು ರದ್ದು – ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

2 ಲಕ್ಷ ಬಿಪಿಎಲ್ ಕಾರ್ಡ್‌ಗಳು ರದ್ದು – ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿನ(state) 2 ಲಕ್ಷಕ್ಕೂ ಅಧಿಕ ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಬಿಪಿಎಲ್ ಕಾರ್ಡ್(bpl card) ಗಳನ್ನು ಆಹಾರ ಇಲಾಖೆ(Food Department) ರದ್ದುಗೊಳಿಸಿದೆ. ಸುಮಾರು 4.80 ಲಕ್ಷ ಅನರ್ಹ ಫಲಾನುಭವಿಗಳು ಸರ್ಕಾರದ ಅನ್ನಭಾಗ್ಯ ಯೋಜನೆಯಿಂದ ಹೊರಬಿದ್ದಿದ್ದಾರೆ. ನಕಲಿ ಕಾರ್ಡ್‌ಗಳ ಪತ್ತೆ ಮತ್ತು ಪಡಿತರ ಸೋರಿಕೆ ತಡೆಯುವ ಉದ್ದೇಶದಿಂದ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ರದ್ದಾದ ಅರ್ಹ ಫಲಾನುಭವಿಗಳು 45 ದಿನಗಳೊಳಗೆ ಸಂಬಂಧಪಟ್ಟ ತಹಶೀಲ್ದಾರ್‌ಗೆ ದಾಖಲೆಗಳೊಂದಿಗೆ ಮನವಿ ಸಲ್ಲಿಸಿ ಕಾರ್ಡ್ ಪುನಃ ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.ಸರ್ಕಾರದ ಮಾನದಂಡಗಳ ಪ್ರಕಾರ, ಸುಮಾರು 7.76 ಲಕ್ಷ ಪಡಿತರ ಚೀಟಿಗಳು ಅನರ್ಹ ಎಂದು ಪಟ್ಟಿ ಮಾಡಲಾಗಿದೆ. ಕುಟುಂಬ ತಂತ್ರಾಂಶ’ದ ಅನ್ವಯ 13.87 ಲಕ್ಷಕ್ಕೂ ಅಧಿಕ ಕಾರ್ಡ್‌ಗಳು ಅನರ್ಹರ ಕೈಯಲ್ಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ, ಅನರ್ಹ ಕಾರ್ಡ್‌ಗಳನ್ನು ರದ್ದುಪಡಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.

ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳ ಕಾರ್ಡ್‌ಗಳು ಕೂಡ ರದ್ದಾಗುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಆತಂಕಪಡುವ ಅಗತ್ಯವಿಲ್ಲ. ತಮ್ಮ ಕಾರ್ಡ್ ಅರ್ಹತೆಯಿದ್ದರೂ ರದ್ದಾಗಿದ್ದರೆ, ಅಂತಹ ನಾಗರಿಕರು 45 ದಿನಗಳ ಒಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ತಾಲೂಕಿನ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಬಹುದು ಎಂದು ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಇನ್ನೂ 6,16,196 ಕಾರ್ಡ್‌ದಾರರು ಇ-ಕೆವೈಸಿ ಮಾಡಿಸಿಲ್ಲ. ಹೊರ ರಾಜ್ಯಗಳಿಂದ ಬಂದ ಸುಮಾರು 57,864 ಮಂದಿ ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವುದು ಪತ್ತೆಯಾಗಿದೆ. ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು, 7.5 ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವವರು ಹಾಗೂ ವಾರ್ಷಿಕ 1.20 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್‌ಗೆ ಅರ್ಹರಲ್ಲ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು