Monday, October 20, 2025

ಸತ್ಯ | ನ್ಯಾಯ |ಧರ್ಮ

ದಕ್ಷಿಣ ಕನ್ನಡ ಜಿಲ್ಲೆಯ ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟವರು ಯಾರು ಎಂದು ಇಲ್ಲಿನ ಜನತೆಗೆ ಗೊತ್ತಿದೆ: ಸಿಎಂ ಸಿದ್ದರಾಮಯ್ಯ

ನಾನು ಸಿಎಂ ಆಗಿರುವವರೆಗೂ ಬಡವರ ಯಾವುದೇ ಯೋಜನೆಯನ್ನು ನಿಲ್ಲಿಸಲ್ಲ. ಕೇಂದ್ರ ಸರ್ಕಾರ ಜಿಎಸ್‌ಟಿ ಜಾರಿ ಮಾಡಿ, ಈಗ ದೀಪಾವಳಿ ಗಿಫ್ಟ್ ಅಂತ ಹೇಳುತ್ತಾರೆ. ನರೇಂದ್ರ ಮೋದಿ ಸರ್ಕಾರ 8 ವರ್ಷ ಟ್ಯಾಕ್ಸ್ ಸಂಗ್ರಹ ಮಾಡಿದೆ. ಈಗ ಅದನ್ನೇ ಕಡಿಮೆ ಮಾಡಿ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರು ಆಯೋಜಿಸಿದ್ದ “ಅಶೋಕ ಜನಮನ” ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ, ರಾಜ್ಯಗಳಿಗೆ ಬಡತನ ಕಾಡುತ್ತಿದೆ ಆದರೆ ಕೇಂದ್ರ ಸರ್ಕಾರಕ್ಕೆ ಅದು ದೀಪಾವಳಿ ಗಿಫ್ಟ್ ಅಂತೆ ಅಂತ ಕಿಡಿಕಾರಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಹಾಳು ಮಾಡಿದ್ದು ಯಾರು ಅಂತ ನೀವೇ ಅರ್ಥ ಮಾಡಿಕೊಳ್ಳಿ. ಜಿಲ್ಲೆಯಲ್ಲಿ ಕೋಮ ಸೌಹಾರ್ದತೆಗೆ ವಿಶೇಷ ಗಮನ ಕೊಡಿ. ಸುಳ್ಳು ಹೇಳುವವರ ವಿರುದ್ಧ ಕಾನೂನು ತಂದು ಕೇಸ್ ದಾಖಲಿಸಲಾಗುತ್ತದೆ ಎಂದು ಹೇಳಿದರು.

ಈ ಜಿಲ್ಲೆಯ 8 ಕ್ಷೇತ್ರಗಳಲ್ಲೂ ನೀವು ಆಶೀರ್ವಾದ ಮಾಡಬೇಕು, ಎಷ್ಟೇ ಖರ್ಚಾದರೂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಾಡುತ್ತೇವೆ. ನುಡಿದಂತೆ ನಡೆದಿದ್ದೇವೆ. ಕೇಳುವ ಹಕ್ಕು ನಮಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page