ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತಗಳ್ಳತನ ಅಕ್ರಮಲ್ಲಿ ಬಿಜೆಪಿ-ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲು: ಕೃಷ್ಣ ಬೈರೇಗೌಡ ಆರೋಪ

ಮತಗಳ್ಳತನ ಅಕ್ರಮಲ್ಲಿ ಬಿಜೆಪಿ-ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲು: ಕೃಷ್ಣ ಬೈರೇಗೌಡ ಆರೋಪ
• ಚುನಾವಣಾ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಹುನ್ನಾರ
• ತನಿಖೆಗೆ ಸಹಕರಿಸಲು ಆಯೋಗ ಹಿಂದೇಟು ಹಾಕುತ್ತಿರುವುದು ಏಕೆ?
• ಚುನಾವಣಾ ಆಯೋಗದ ವಿರುದ್ಧ ಸಚಿವರ ಸರಣಿ ಪ್ರಶ್ನೆ

ಮತಗಳ್ಳತನ ದೇಶದಾದ್ಯಂತ ನಡೆಯುತ್ತಿದ್ದು, ಈ ಅಕ್ರಮದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆರೋಪಿಸಿದರು.

ಮತಗಳ್ಳತನದ ವಿರುದ್ಧ ಶನಿವಾರ ತಮ್ಮ ಗೃಹ ಕಚೇರಿಯಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ, ಬಿಜೆಪಿಯ ಪಕ್ಷಪಾತಿಯ ರೀತಿ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದ್ದಾರೆ” ಎಂದು ಕಿಡಿಕಾರಿದರು.

“ದೇಶದ ವ್ಯವಸ್ಥೆಯಲ್ಲಿ ಚುನಾವಣಾ ಆಯೋಗಕ್ಕೆ ಮಹತ್ತರವಾದ ಜವಾಬ್ದಾರಿ ಇದೆ. ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯಾವುದೇ ಅಕ್ರಮವಾಗದಂತೆ ನೋಡಿಕೊಳ್ಳುವುದು ಈ ಆಯೋಗದ ಮೊದಲ ಕರ್ತವ್ಯ. ಆದರೆ, ಕಲಬುರಗಿಯ ಆಳಂದ ಕ್ಷೇತ್ರದಿಂದ ಬೆಂಗಳೂರಿನ ಮಹದೇವಪುರ ಕ್ಷೇತ್ರದ ವರೆಗೆ ಮತದಾರ ಪಟ್ಟಿಯಲ್ಲೇ ಚುನಾವಣಾ ಆಯೋಗ ಎಷ್ಟು ಅಕ್ರಮ ಎಸಗಿದೆ ಎಂಬ ವಿಚಾರ ಕಣ್ಣ ಮುಂದಿದೆ” ಎಂದು ವಿಷಾದಿಸಿದರು.

ಮಹದೇವಪುರದಲ್ಲಿ 35,000 ಬೋಗಸ್ ಮತಗಳನ್ನು ಪಟ್ಟಿಗೆ ಸೇರಿಸಿದ್ದಾರೆ ಎಂಬುದನ್ನು ಸಾಕ್ಷಿ ಸಮೇತ ನಿರೂಪಿಸಲಾಗಿದೆ. ಆಳಂದ ಕ್ಷೇತ್ರದಲ್ಲಿ 6,000 ನೈಜ ಮತದಾರರುಗಳ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಅಕ್ರಮದ ಮಾಹಿತಿ ಸೂಕ್ತ ಸಮಯಕ್ಕೆ ಶಾಸಕರಾದ ಬಿ.ಆರ್. ಪಾಟೀಲ್ ಅವರ ಗಮನಕ್ಕೆ ಬಂದ ಕಾರಣಕ್ಕೆ ಈ ಹಗರಣವನ್ನು ತಡೆಯಲಾಯಿತು. ಇಲ್ಲದಿದ್ದರೆ ಅಷ್ಟೂ ಮತಗಳು ಪಟ್ಟಿಯಿಂದ ತೆಗೆಯಲಾಗುತ್ತಿತ್ತು. ಇದು ಚುನಾವಣೆಯೊಂದರ ಫಲಿತಾಂಶದ ಮೇಲೂ ಪರಿಣಾಮ ಬೀರುತ್ತಿತ್ತು” ಎಂದು ಅಭಿಪ್ರಾಯಪಟ್ಟರು.

ಆಳಂದ ಕ್ಷೇತ್ರದಲ್ಲಿ ಸೈಬರ್ ಸೆಂಟರ್ ಬಳಸಿ ಹತ್ತಾರು ಫೋನ್ ನಂಬರ್ ಮೂಲಕ ಮತದಾರರ ಪಟ್ಟಿಯಿಂದ ಯಾರದ್ದೋ ಹೆಸರನ್ನು ತೆಗೆಯಲು ಇನ್ಯಾರದ್ದೋ ಹೆಸರಿನಿಂದ ಅರ್ಜಿ ಹಾಕಲಾಗಿದೆ. ಸುಮಾರು 70 ಕ್ಕೂ ಹೆಚ್ಚು ನಕಲಿ ಫೋನ್ ನಂಬರ್ ಗಳನ್ನು ಬಳಸಿರುವ ಮಾಹಿತಿ ಈಗಾಗಲೇ ತನಿಖೆಯಿಂದ ಹೊರಬಂದಿದೆ. ಈ ನಂಬರ್ಗಳು ಯಾರ ಹೆಸರಿನಲ್ಲಿ ಖರೀದಿಸಲಾಯಿತು? ಇವುಗಳ ಲೊಕೇಷನ್ ಎಲ್ಲಿದೆ? ಮತಗಳ್ಳತನಕ್ಕೆ ಬಳಸಿದ ಲ್ಯಾಪ್ಟಾಪ್ ಗಳ ಐಪಿ ವಿಳಾಸದ ಮಾಹಿತಿ ಸೇರಿದಂತೆ ತನಿಖೆಗೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನೂ ನೀಡಲು ಚುನಾವಣಾ ಆಯೋಗ ಹಿಂದೇಟು ಹಾಕುತ್ತಿರುವುದು ಏಕೆ? ಇವನ್ನೆಲ್ಲ ಗಮನಿಸಿದರೆ ಆಯೋಗ ಬಿಜೆಪಿಗಳ ಪಕ್ಷಪಾತಿಗಳಾಗಿದ್ದು, ಮತಗಳ್ಳತನ ಅಕ್ರಮದಲ್ಲಿ ಅವರೂ ಶಾಮೀಲಾಗಿರುವುದು ಸ್ಷಷ್ಟವಾಗುವುದಿಲ್ಲವೇ?” ಎಂದರು.

“ಚುನಾವಣಾ ಆಯೋಗ ಹಾಗೂ ಬಿಜೆಪಿ ಮುಂದೆ ನಿಂತು ಇಡೀ ಚುನಾವಣಾ ವ್ಯವಸ್ಥೆಯನ್ನೇ ಹಾಳು ಮಾಡಬೇಕು ಎಂದು ಪಣತೊಟ್ಟಂತಿದೆ.  ಆದರೆ, ನಾವು ಇದಕ್ಕೆ ಆಸ್ಪದ ನೀಡಬಾರದು. ಚುನಾವಣಾ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕು. ಇಲ್ಲದಿದ್ದರೆ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಇಂದು ಮತಗಳ್ಳತನದ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಮತದಾರರು ಈ ಅಕ್ರಮದ ಬಗ್ಗೆ ಎಚ್ಚರಾಗಬೇಕು. ಮುಂದಿನ ಚುನಾವಣೆಗಳಲ್ಲಿ ಜನತಾ ನ್ಯಾಯಾಲಯವೇ ಈ ಅಕ್ರಮಕ್ಕೆ ಸರಿಯಾದ ಉತ್ತರ ನೀಡಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು