Monday, October 27, 2025

ಸತ್ಯ | ನ್ಯಾಯ |ಧರ್ಮ

ಸಕ್ಕರೆ ಕಾರ್ಖಾನೆ ಚುನಾವಣೆ: ರಮೇಶ್ ಜಾರಕಿಹೊಳಿ ತಂಡಕ್ಕೆ ಮತ್ತೆ ಮುಖಭಂಗ; ಗೆದ್ದು ಬೀಗಿದ ಸವದಿ ತಂಡ

ಇತ್ತೀಚೆಗಷ್ಟೇ ನಡೆದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಕ್ಷೇತ್ರದ ಮೇಲಿನ ಪ್ರಾಬಲ್ಯ ಸಾಧಿಸಿದ್ದ ಲಕ್ಷ್ಮಣ ಸವದಿ ಅಥಣಿಯ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣೆಯಲ್ಲೂ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.

ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಬೆಂಬಲಿತ ಎಲ್ಲಾ 12 ಮಂದಿ ಬೆಂಬಲಿಗರು ಜಯಭೇರಿ ಬಾರಿಸಿದ್ದಾರೆ. ಆ ಮೂಲಕ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ತಂಡ ನೆಲ ಕಚ್ಚುವಂತಾಗಿದೆ. ಹಾಗೂ ಲಕ್ಷ್ಮಣ ಸವದಿ ಬೆಂಬಲಿತ ‘ರೈತ ಸಹಕಾರಿ ಪ್ಯಾನೆಲ್’ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ.

ರಮೇಶ ಜಾರಕಿಹೊಳಿ ಬೆಂಬಲದಿಂದ ಮಾಜಿ ಶಾಸಕರಾದ ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ, ಶಹಜಹಾನ್ ಡೊಂಗರಗಾವ, ಕಾಂಗ್ರೆಸ್ ಮುಖಂಡ ಗಜಾನನ ಮಂಗಸುಳಿ ನೇತೃತ್ವದ ಸ್ವಾಭಿಮಾನಿ ರೈತ ಪ್ಯಾನಲ್ ರಚಿಸಿ ಸವದಿ ಅವರ ವಿರುದ್ಧ ಕಾರ್ಯತಂತ್ರ ರೂಪಿಸಲಾಗಿತ್ತು. ಆದರೆ ಎಲ್ಲಾ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page