Thursday, October 30, 2025

ಸತ್ಯ | ನ್ಯಾಯ |ಧರ್ಮ

ಬುರುಡೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಮಹೇಶ್ ಶೆಟ್ಟಿ ತಿಮರೋಡಿ ತಂಡದಿಂದ ಅರ್ಜಿ!

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ದೊಡ್ಡ ಕೋಲಾಹಲವೇ ಎಬ್ಬಿಸಿತ್ತು. ಈಗ ಈ ಕೇಸ್ ರದ್ದುಪಡಿಸುವಂತೆ ಧರ್ಮಸ್ಥಳ ವಿರುದ್ಧ ನಿಂತಿದ್ದ ತಂಡದಿಂದ ಈಗ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ, ಎಸ್‌ಐಟಿ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಆರಂಭಿಕ ಹಂತದಲ್ಲಿ ಎಲ್ಲಾ ಹೇಳಿಕೆಯಲ್ಲಿ ಎಸ್‌ಐಟಿ ತನಿಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಈ ತಂಡ ಇದೀಗ ನೇರವಾಗಿ ಎಸ್ಐಟಿ ತನಿಖೆಯ ಬಗ್ಗೆ ಅಪಸ್ವರ ಎತ್ತಿದೆ. ಹಾಗೆಯೇ ಎಫ್‌ಐಆರ್ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದೆ.

ಮಾಸ್ಕ್ ಮ್ಯಾನ್ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದು, ಆ ನಂತರ ಸುಜಾತಾ ಭಟ್ ಕೇಸಿನಲ್ಲಿ ಉಲ್ಟಾ ಹೊಡೆದಿದ್ದು ಸೇರಿದಂತೆ ಹಲವು ಬೆಳವಣಿಗೆಗಳು ತಮ್ಮ ಲೆಕ್ಕಾಚಾರದ ವಿರುದ್ಧವಾಗಿಯೇ ನಡೆದ ಹಿನ್ನೆಲೆಯಲ್ಲಿ ಈ ತಂಡ ಈಗ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದೆ.

ಧರ್ಮಸ್ಥಳದ ಸೌಜನ್ಯ ಪ್ರಕರಣ ಮಾಸ್ಕ್ ಮ್ಯಾನ್ ಚಿನ್ನಯ್ಯ ಎಂಟ್ರಿ ನಂತರ ಪ್ರಕರಣ ಇನ್ನೊಂದು ಮಗ್ಗುಲಿಗೆ ತೆರೆದುಕೊಂಡಿತ್ತು. ಚಿನ್ನಯ್ಯ ಸೃಷ್ಟಿಸಿದ ಸುಳ್ಳು ನರೇಟಿವ್ ಒಂದು ರೀತಿಯಲ್ಲಿ ಈ ತಂಡಕ್ಕೆ ಮತ್ತಷ್ಟು ಮುಜುಗರ ಸೃಷ್ಟಿಸಿತ್ತು. ಹೀಗಾಗಿ ಈ ತಂಡ ಇದೀಗ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಇಂದು ಅರ್ಜಿ ವಿಚಾರಣೆ ನಡೆಯಲಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page