Thursday, October 30, 2025

ಸತ್ಯ | ನ್ಯಾಯ |ಧರ್ಮ

ಸಂಸದ ತೇಜಸ್ವಿ ಸೂರ್ಯ ಅನುಭವವಿಲ್ಲದ ವೇಸ್ಟ್ ಮೆಟೀರಿಯಲ್ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಆ ಹುಡುಗ (Tejasvi Surya) ಎಳಸು, ಆತನಿಗೆ ಇನ್ನೂ ಅನುಭವವಿಲ್ಲ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಸಂಸದ (MP) ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು? ಈ ದೇಶದಲ್ಲಿ, ಪ್ರಪಂಚದಲ್ಲಿಯೇ ಟನಲ್ ರಸ್ತೆಗಳೇ ಬೇಡ ಎಂದು ಅವನು ಕೇಂದ್ರ ಸಚಿವನಾದ ಮೇಲೆ ಲೋಕಸಭೆಯಲ್ಲಿ ತೀರ್ಮಾನ ಮಾಡಲಿ ಎಂದು ಕಿಡಿ ಕಾರಿದ್ದಾರೆ.

ಟನಲ್ ರಸ್ತೆ ಯೋಜನೆಯನ್ನು ತಂತ್ರಜ್ಞರ ಅಭಿಪ್ರಾಯ ಪಡೆದು ಮಾಡಬೇಕಿತ್ತು ಎನ್ನುವ ಹೇಳಿಕೆಯ ಬಗ್ಗೆ ಕೇಳಿದಾಗ, ಏನೋ ಹೋಗಲಿ ಅಂತ ಗೌರವ ಕೊಟ್ಟು ನನ್ನ ಜೊತೆ ಮಾತನಾಡಲು ಅವಕಾಶ ನೀಡಿದರೆ ಏನೇನೋ ಮಾತನಾಡುತ್ತಿದ್ದಾನೆ. ಆದರೆ ನಾನು ಆತನ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಸಂಸದ ತೇಜಸ್ವಿ ಸೂರ್ಯನಿಗೆ ಪ್ರಪಂಚ ಹೇಗಿದೆ ಎಂದೇ ಗೊತ್ತಿಲ್ಲ ಎಂದರು.

ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ..?: ನಾನು ಹುಡುಗನ ಬಳಿ ಕಾರಿಲ್ಲದಿದ್ದರೆ ಹೆಣ್ಣು ನೀಡುವುದಿಲ್ಲ ಎಂದಿದ್ದೆ. ಅದನ್ನೇ ಹಿಡಿದುಕೊಂಡು ಮಾತಾಡುತ್ತಿದ್ದಾನೆ. ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ‌ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು? ಇವರಿಗೆ ಕಾರುಗಳು ಏಕೆ ಬೇಕು? ಬೆಂಗಳೂರಿನಲ್ಲಿ 1.30 ಕೋಟಿಗೂ ಹೆಚ್ಚು ವಾಹನಗಳಿವೆ ಎಂಬುದನ್ನು ಆತ ಅರ್ಥ ಮಾಡಿಕೊಳ್ಳಬೇಕು, ಅವರಿಗೆಲ್ಲ ವಾಹನ ಬಳಸಬೇಡಿ ಎಂದು ಹೇಳಲು ಆಗುತ್ತದೆಯೇ? ಎಂದು ತಿವಿದರು.

ಹೀ ಇಸ್ ವೇಸ್ಟ್ ಮೆಟಿರಿಯಲ್: ಅವನ ಬಗ್ಗೆ ನನ್ನ ಬಳಿ ಯಾವ ಪ್ರಶ್ನೆಯನ್ನೂ ಕೇಳಬೇಡಿ. ಹೋಲಿಕೆ ಮಾಡಬೇಡಿ. ಹೀ ಇಸ್ ಎ ವೇಸ್ಟ್ ಮೆಟಿರಿಯಲ್, ಖಾಲಿ ಟ್ರಂಕ್ ಆತ. ಅವರ ಪಕ್ಷದ ಹಿರಿಯ ನಾಯಕರಾದ ಅಶೋಕ್, ಅಶ್ವತ್ಥ ನಾರಾಯಣ್, ಬಸವರಾಜ ಬೊಮ್ಮಾಯಿ,‌ ಜಗದೀಶ್‌ ಶೆಟ್ಟರ್ ಅಂತಹವರು ಮಾತನಾಡಿದರೆ ಉತ್ತರ ನೀಡೋಣ. ಯಾಕೆಂದರೆ ‌ಅವರಿಗೆ ಇದೆಲ್ಲವೂ ಅರ್ಥವಾಗುತ್ತದೆ. ಶೆಟ್ಟರ್ ಅವರು ತಮ್ಮ ಊರಿನಲ್ಲಿ ಬಿಆರ್ ಟಿಎಸ್ ಮಾಡಲು ಪ್ರಯತ್ನ ಮಾಡಿದರೂ ಆಗಲಿಲ್ಲ. ಬೆಂಗಳೂರಿನಲ್ಲಿ ಬಿಆರ್ ಟಿಎಸ್ ಮಾಡಲು ಜಾಗವಿದೆಯೇ? ಭೂ ಪರಿಹಾರ ಎಷ್ಟಾಗುತ್ತದೆ ಎನ್ನುವ ಅರಿವು ತೇಜಸ್ವಿ ಸೂರ್ಯನಿಗೆ ತಲೆಯಲ್ಲಿಯೇ ಇಲ್ಲ ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page