Friday, November 14, 2025

ಸತ್ಯ | ನ್ಯಾಯ |ಧರ್ಮ

ಮಹಾನ್ ಪರಿಸರವಾದಿ, ವೃಕ್ಷಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ನಿಧನ

ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (ವಯಸ್ಸು 114) ಉಸಿರಾಟದ ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ಬೆಂಗಳೂರಿನ ಜಯನಗರದ ಖಾಸಗಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಿಸದೆ 2025 ನವೆಂಬರ್ 13ರಂದು ಮಧ್ಯಾಹ್ನ 12 ಗಂಟೆಗೆ ನಿಧನರಾದರು.

ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣ, ತಮ್ಮ ದುಃಖವನ್ನು ಮರಗಳಿಗೂ ಮಕ್ಕಳಂತೆ ಭಾವಿಸಿ ರಸ್ತೆಯ ಬದಿಯಲ್ಲಿ ಸಾಲುಮರಗಳನ್ನು ನೆಟ್ಟು ಹಸಿರೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಅಮೂಲ್ಯ ಕೊಡುಗೆ ನೀಡಿದ್ದರು. ಇದಕ್ಕಾಗಿ ಅವರಿಗೆ 2019ರಲ್ಲಿ ಭಾರತದ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು.

ಅವರು 385 ಆಲದ ಮರಗಳನ್ನು ನೆಟ್ಟು, ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿಕೊಂಡಿದ್ದರು. ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವಿನ 4.5 – ಕಿಲೋಮೀಟರ್ ( 2.8 ಮೈಲಿ ) ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಡುವ ಮತ್ತು ಅವುಗಳನ್ನು ಪೋಷಿಸುವ ಕಾರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.

ಪರಿಸರ ಸಂರಕ್ಷಣೆಯಲ್ಲಿ ತಮಗೆ ದೊರೆತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿ, ಪುರಸ್ಕಾರ ಹಾಗೂ ಗೌರವಗಳು ಅನೇಕವಾಗಿದ್ದು, 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page