Tuesday, November 25, 2025

ಸತ್ಯ | ನ್ಯಾಯ |ಧರ್ಮ

ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್‌ ಸರ್ಕಾರದ್ದು: ನಿಖಿಲ್‌ ಕುಮಾರಸ್ವಾಮಿ

ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು. ಕಳೆದ ಎರಡೂವರೆ ವರ್ಷದಲ್ಲಿ 5 ಲಕ್ಷ ಕೋಟಿ ರೂ. ಹೆಚ್ಚು ಸಾಲ ಮಾಡಿದೆ. ಇದು ಕಾಂಗ್ರೆಸ್ ಆಡಳಿತ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಭಾರತೀನಗರ ಸಮೀಪದ ದೇವೇಗೌಡನ ದೊಡ್ಡಿ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಗ್ಯಾರಂಟಿ, ಗ್ಯಾರಂಟಿ ಅಂತಾರೆ. ಆದರೆ, ಅದನ್ನ ಕೂಡ ಸರಿಯಾಗಿ ಕೊಟ್ಟಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ದುಡ್ಡು ಬಿಡುಗಡೆ ಮಾಡ್ತಾರೆ ಎಂದು ದೂರಿದರು.

ಜಿಲ್ಲೆಯ ಶಾಸಕರು(ಕಾಂಗ್ರೆಸ್‌) ಡಿ.ಕೆ.ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ. ಮಂಡ್ಯ ಜಿಲ್ಲೆಗೆ ಅವರು ಏನು ಬಿರುದ್ದು ಕೊಟ್ಟರು? ಛತ್ರಿಗಳು ಅಂದ್ರು, ಅದರ ಅರ್ಥ ತಿಳಿದಿಕೊಳ್ಳಬೇಕು ಎಂದು ಹೇಳಿದರು.

ನಮ್ಮ ಪಕ್ಷದ ಬಗ್ಗೆ ಕಲಾಪದಲ್ಲಿ ಕೀಳಾಗಿ ಮಾತನಾಡಿದ್ರು. ಜೆಡಿಎಸ್ ಮುಂದೆ ಸಿಂಗಲ್ ಡಿಜಿಟ್‌ಗೆ ಬರುತ್ತೆ ಅಸ್ತಿತ್ವ ಇಲ್ಲ ಅಂತ ಲೇವಡಿ ಮಾಡಿದ್ರು. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಯ್ತು.? ಅಲ್ಲಿನ ಜನರು ಕಾಂಗ್ರೆಸ್ ಪರಿಸ್ಥಿತಿ ತೋರಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page