Tuesday, November 25, 2025

ಸತ್ಯ | ನ್ಯಾಯ |ಧರ್ಮ

ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ | ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 25: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .

ಅವರು ಇಂದು ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶುಭ ಹಾರೈಕೆ
ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು
ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು.

ರಾಹುಲ್ ಗಾಂಧಿ ಭೇಟಿ ಸದ್ಯಕ್ಕಿಲ್ಲ
ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ದಕ್ಕಿಲ್ಲ ಎಂದೂ ಕೂಡ ಅವರು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page