Wednesday, November 26, 2025

ಸತ್ಯ | ನ್ಯಾಯ |ಧರ್ಮ

ಮುರುಘಾ ಶ್ರೀ ನಿರ್ದೋಷಿ – ಕೋರ್ಟ್‌ ತೀರ್ಪುನ ವಿರುದ್ಧ ಒಡನಾಡಿ ಸ್ಟಾನ್ಲಿ ಅಸಮಾಧಾನ

ಮೈಸೂರು : ಪೋಕ್ಸೊ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಯನ್ನು (Murugha Shree) ನಿರ್ದೋಷಿ ಎಂದು 2 ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಈ ಬೆನ್ನಲ್ಲೇ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟಾನ್ಲಿ (Odanadi Stanley) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋರ್ಟ್ ತೀರ್ಪಿ‌ನ ಬಗ್ಗೆ ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸ್ಟಾನ್ಲಿ, ಈ ತೀರ್ಪನ್ನು ನಾವು ಎಂದಿಗೂ ನಿರೀಕ್ಷಿಸಿರಲಿಲ್ಲ. ಇದು ಹಣ ಮತ್ತು ಅಧಿಕಾರದ ಜಯವಲ್ಲವಾ? ದುಡ್ಡಿದ್ದರೆ, ಪವರ್ ಇದ್ದರೆ ಗೆದ್ದುಕೊಂಡು ಬರಬಹುದು ಎಂಬ ಸಂದೇಶವನ್ನು ಈ ತೀರ್ಪು ನೀಡುತ್ತದೆ. ಆರೋಪಿಗಳು ಕುಣಿದಾಡುತ್ತಾ ಹೊರಗೆ ಬಂದರೆ ಅವರಿಗೆ ನೈತಿಕ ಧೈರ್ಯ ತುಂಬುತ್ತದೆ, ಆದರೆ ನೊಂದ ಮಕ್ಕಳಿಗೆ ಧೈರ್ಯ ಕುಗ್ಗುತ್ತದೆ ಎಂದು ಕಿಡಿಕಾರಿದರು.

ಏನಿದು ಪ್ರಕರಣ?: ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲದೆ ಇತರೆ ಮಕ್ಕಳ ಮೇಲೂ ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಠದಲ್ಲಿನ ಅಡುಗೆ ಕೆಲಸದ ಮಹಿಳೆ ದೂರಿನಲ್ಲಿ ವಿವರಿಸಿದ್ದರು. ಇದರ ಆಧಾರದಡಿ ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ 2022ರ ಅಕ್ಟೋಬ‌ರ್ 13ರಂದು ಎಫ್‌ಐಆ‌ರ್ ದಾಖಲಿಸಲಾಗಿತ್ತು. ತದನಂತರ ಈ ದೂರನ್ನು ಚಿತ್ರದುರ್ಗ ಗ್ರಾಮೀಣ ಠಾಣೆಗೆ ವರ್ಗಾಯಿಸಲಾಗಿತ್ತು.

ಎಫ್‌ಐಆರ್‌ನಲ್ಲಿ ಆರೋಪಿ ಶರಣರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 376 (ಸಿ), 376 (2) (ಎನ್), 376 , 376 (3), 366, 366 (2), 323, 114 2 34, 5 (2), 6,7 2 17, ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ ಸೆಕ್ಷನ್ 3 (ಎಫ್ ಮತ್ತು 7 ಹಾಗೂ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ಸಂರಕ್ಷಣೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಇಬ್ಬರು ಸಂತ್ರಸ್ತೆಯರು ಇರುವ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದರು

Related Articles

ಇತ್ತೀಚಿನ ಸುದ್ದಿಗಳು

You cannot copy content of this page