Monday, December 8, 2025

ಸತ್ಯ | ನ್ಯಾಯ |ಧರ್ಮ

ಕೋರ್ಟ್ ಆವರಣದಲ್ಲೇ ಸಾಮೂಹಿಕ ಅತ್ಯಾಚಾರ: ವಿಡಿಯೋ ಮಾಡಿ ಬ್ಲಾಕ್‌ಮೇಲ್

ಮುಂಬೈ: ಸಂತ್ರಸ್ತರಿಗೆ ನ್ಯಾಯ ಒದಗಿಸುವ ನ್ಯಾಯಾಲಯದ (ಕೋರ್ಟ್) ಆವರಣದಲ್ಲಿಯೇ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ.

ಥಾಣೆ ಫ್ಯಾಮಿಲಿ ಕೋರ್ಟ್ ಆವರಣದಲ್ಲಿ ನಿಲ್ಲಿಸಿದ್ದ ಕಾರೊಂದರಲ್ಲಿ ವಿವಾಹಿತ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಆರೋಪಿ ಕೇದಾರ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಂತ್ರಸ್ತೆಯನ್ನು ಬಲೆಗೆ ಬೀಳಿಸಿಕೊಂಡಿದ್ದನು.

ಆಕೆಯ ಹುಟ್ಟುಹಬ್ಬದ ಕೇಕ್‌ಗೆ ಮಂಪರು ಔಷಧಿಯನ್ನು ಬೆರೆಸಿ ತಿನ್ನಿಸಿದ್ದಾನೆ. ಆಕೆ ಪ್ರಜ್ಞೆ ಕಳೆದುಕೊಂಡ ನಂತರ, ಕೇದಾರ್ ಮತ್ತೊಬ್ಬ ವ್ಯಕ್ತಿಯೊಂದಿಗೆ ಸೇರಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ಘಟನೆಯು ಆಗಸ್ಟ್ 25, 2024 ರಂದು ನಡೆದಿದ್ದು, ಸಂತ್ರಸ್ತೆಯು ಈ ತಿಂಗಳ 5 ರಂದು ದೂರು ನೀಡಿದ್ದಾರೆ.

ಲೈಂಗಿಕ ದೌರ್ಜನ್ಯವನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದ ಆರೋಪಿಗಳು, ಅದನ್ನು ತೋರಿಸಿ ಸಂತ್ರಸ್ತೆಗೆ ಬೆದರಿಕೆ ಹಾಕುತ್ತಿದ್ದರು. ಈ ಕಾರಣದಿಂದಲೇ ಸಂತ್ರಸ್ತೆಯು ದೂರು ನೀಡಲು ವಿಳಂಬ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page