ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮಾನವ ಹಕ್ಕುಗಳನ್ನು ಜೀವಂತವಾಗಿರಿಸುವುದು ನಮ್ಮೆಲ್ಲರ ಜವಾಬ್ದಾರಿ – ನ್ಯಾ.ದೇವರಾಜು

ಮಾನವ ಹಕ್ಕುಗಳನ್ನು ಜೀವಂತವಾಗಿರಿಸುವುದು ನಮ್ಮೆಲ್ಲರ ಜವಾಬ್ದಾರಿ – ನ್ಯಾ.ದೇವರಾಜು

ಹಾಸನ: ಮಾನವನಿಗೆ ಅವನ ಹುಟ್ಟಿನಿಂದಲೇ ದೊರೆಯುವ ಹಕ್ಕುಗಳೆಂದರೇ ಬದುಕು, ಮಾತನಾಡುವುದು, ಧರ್ಮ, ಭಾಷೆ, ಉದ್ಯೋಗ ಇವುಗಳನ್ನು ಯಾರೂ ಮೊಟಕು ಮಾಡಬಾರದು. ಇವುಗಳನ್ನು ಕಾಪಾಡುವುದು ನಮ್ಮ ಸಂವಿಧಾನ ಮತ್ತು ಸಮಾಜದ ಜವಾಬ್ದಾರಿಯಾಗಿದೆ ಎಂದು ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ದೇವರಾಜು ತಿಳಿಸಿದರು.

ನಗರದ ಸಾಲಗಾಮ ರಸ್ತೆ ಬಳಿ ಇರುವ ಎಂ. ಕೃಷ್ಣ ಕಾನೂನು ಕಾಲೇಜು ಸಭಾಂಗಣದಲ್ಲಿ ನಾಗರಿಕ ಹಕ್ಕುಗಳ ಸಂರಕ್ಷಣ ಸಂಘ, ಜಿಲ್ಲಾ ಚಾಪ್ಟರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಂ. ಕೃಷ್ಣ ಕಾನೂನು ಕಾಲೇಜು, ಸರ್ಕಾರಿ ಕಾನೂನು ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಶ್ವ ಮಾನವ ಹಕ್ಕುಗಳ ಮುಖ್ಯ ಉದ್ದೇಶ ಏನೆಂದರೆ ಪ್ರತಿಯೊಬ್ಬ ವ್ಯಕ್ತಿಗೂ ಅವರದೆಯಾದಂತಹ ಕಾನೂನಿನ ವ್ಯಾಪ್ತಿಯಾದಂತಹ ಜೀವನವನ್ನು ನಡೆಸುವುದು. ಮಾತನಾಡುವುದು ತನಗೆ ಸೂಕ್ತವಾದಂತಹ ಧರ್ಮ ಆಚರಣೆ ಮಾಡುವಂತಹ ಮತ್ತು ಸೂಕ್ತವಾದಂತಹ ಭಾಷೆಯಲ್ಲಿ ಮಾತನಾಡಲು, ಉದ್ಯೋಗ ಮಾಡುವುದು ಸೇರಿದಂತೆ ಪ್ರತಿಯೊಂದು ಹಕ್ಕುಗಳಿವೆ. ಯಾವುದೇ ವ್ಯಕ್ತಿಗೆ ಲಿಂಗದ ಆಧಾರದ ಮೇಲೆ ಇಲ್ಲವೇ ಧರ್ಮದ ಆಧಾರದ ಮೇಲೆ ಮತ್ತೆ ಇತರೆ ಯಾವುದೇ ಆಧಾರದ ಮೇಲೆ ತಾರತಮ್ಯ ಮಾಡಬಾರದು ಎಂದು ಹೇಳಿದರು.

ಈ ಭೂಮಿ ಮೇಲೆ ಜೀವಿಸುವ ಸ್ವಾತಂತ್ರ್ಯ, ಉದ್ಯೋಗ ಸೇರಿದಂತೆ ಇತರೆ ಮಾನವನ ಹಕ್ಕುಗಳಿವೆ. ಯಾರ ಹಕ್ಕುಗಳನ್ನು ಯಾರು ಮೊಟಕುಗೊಳಿಸಬಾರದು. ಮಾನವನ ಹಕ್ಕುಗಳು ಉಲ್ಲಂಘನೆಯಾದ ಪರಿಣಾಮ ಕಾನೂನುಗಳ ರಚನೆಯಾಗಿ ಜಾರಿಯಾಗುತ್ತಿದೆ. 1948ರಲ್ಲಿ ವಿಶ್ವ ಸಂಸ್ಥೆಯವರು ಮಾನವನ ಹಕ್ಕುಗಳ ಉಲ್ಲಂಘನೆ ಕುರಿತು ಡಿ.10 ದಿನವನ್ನು ವಿಶ್ವ ಮಾನವ ಹಕ್ಕುಗಳ ದಿನವನ್ನಾಗಿ ಘೋಷಣೆ ಮಾಡಿದೆ  ಎಂದರು.

ಇತಿಹಾಸ ನೋಡಿದರೇ ತಾರತಮ್ಯ ಎಂಬುದು ಮೊದಲಿನಿಂದಲೂ ನಡೆಯುತ್ತಿದೆ. ಸ್ವಾತಂತ್ರ್ಯದ ನಂತರ ಕೂಡ ತಾರತಮ್ಯವನ್ನು ಕಾಣುತ್ತಿದ್ದೇವೆ. ಒಂದು ಪುರುಷ ಮತ್ತು ಮಹಿಳೆಯರ ನಡುವೆ ತಾರತಮ್ಯ. ಲಿಂಗ ಶೋಷಣೆ, ಧರ್ಮ-ಧರ್ಮಗಳ ನಡುವೆ ವೈಮನಸ್ಸು, ಇನ್ನೊಂದು ಧರ್ಮವನ್ನು ದ್ವೇಷ ಮಾಡು, ಯಾವುದು ಕಡಿಮೆ ಹೆಚ್ಚು ಎಂದು ಯಾವ ಧರ್ಮವು ಹೇಳುವುದಿಲ್ಲ. ನಮ್ಮ ಅನುಕೂಲಕ್ಕೆ ತಕ್ಕಂತೆ ಧರ್ಮವನ್ನು ಪಾಲಿಸುತ್ತಿದ್ದೇವೆ ಎಂದು ಕಿವಿಮಾತು ಹೇಳಿದರು.

ಆದರೆ ಮತ್ತೊಂದು ಧರ್ಮದ ಬಗ್ಗೆ ಯಾವುದೇ ಕಾರಣಕ್ಕೂ ತಾರತಮ್ಯ ಮಾಡಬಾರದು. ಪ್ರತಿಯೊಬ್ಬರಿಗೂ ಸಹ ಉತ್ತಮವಾಗಿ ನಮ್ಮ ಸಂವಿಧಾನದ ವ್ಯಾಪ್ತಿಯಲ್ಲಿ ಗೌರವಯುತ ಜೀವನ ಮಾಡುವಂತಹ ಹಕ್ಕುಗಳಿದ್ದು, ಅದನ್ನು ಯಾರು ಮೊಟಕು ಮಾಡಬಾರದು. ಮೊಟಕು ಮಾಡುವುದನ್ನು ತಡೆಯುವುದಕ್ಕೆ ಇರುವುದು ಒಂದೇ ವರ್ಗ ಅದೇ ಮಾನವ ವರ್ಗ ಎಂದು ಸಲಹೆ ನೀಡಿದರು. ಸಮಾಜದಲ್ಲಿ ನಡೆಯುವ ದೌರ್ಜನ್ಯ ಎಲ್ಲಾ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಅದಕ್ಕಾಗಿ ಕಾನೂನು ರಚಿತವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗೌರವ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ, ಎಂ. ಕೃಷ್ಣ ಕಾನೂನು ಕಾಲೇಜು ಪ್ರಾಂಶುಪಾಲ ಡಾ. ವಿ. ಶ್ರೀನಿವಾಸ್, ಸರ್ಕಾರಿ ಕಾನೂನು ಕಾಲೇಜು ಪ್ರಾಂಶುಪಾಲರಾದ ಶೀನಾ ಥಾಮಸ್, ವಕೀಲ ಅನ್ಸದ್ ಪಾಳ್ಯ, ಪ್ರಬುದ್ಧ ಮನಸ್ಸು  ಸಮಾಜ ಪ್ರಗತಿಪರ ಚಿಂತಕ ಹೆಚ್.ಕೆ. ವಿವೇಕಾನಂದ, ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಸ್. ಶರಣ್ಯ ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು