Tuesday, December 23, 2025

ಸತ್ಯ | ನ್ಯಾಯ |ಧರ್ಮ

ನಿವೃತ್ತ ನೌಕರರ ಸಮಸ್ಯೆ ಸರ್ಕಾರ ಬೇಗ ಬಗೆಹರಿಸಲಿ – ಶಾಸಕ ಹೆಚ್.ಪಿ. ಸ್ವರೂಪ್

ಹಾಸನ: ನಿವೃತ್ತ ನೌಕರರ ಸಮಸ್ಯೆಗಳನ್ನು ಬಗೆಹರಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಈ ಕುರಿತು ನಾನು ಸೇರಿದಂತೆ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಗಮನ ಸೆಳೆಯೋಣ ಎಂದು ಕ್ಷೇತ್ರದ ಶಾಸಕರಾದ ಹೆಚ್.ಪಿ. ಸ್ವರೂಪ್ ಹೇಳಿದರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗ ಮಟ್ಟದ ಪದಾಧಿಕಾರಿಗಳು, ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರ ಸಮಾವೇಶದಲ್ಲಿ ಅವರು ಮಾತನಾಡಿ ತಮ್ಮ ನಿರ್ಧಾರ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ನೌಕರರ ಸಂಘದ ರಾಜ್ಯ ಅಧ್ಯಕ್ಷ ಕೆ. ಬ್ಯೆರಪ್ಪ ಅವರು, ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ನಿವೃತ್ತ ನೌಕರರು ಮತ್ತು ಒಂದು ಲಕ್ಷಕ್ಕೂ ಅಧಿಕ ಪಿಂಚಣಿದಾರರು ಇದ್ದು, ಅವರ ಅನೇಕ ಸಮಸ್ಯೆಗಳು ಇನ್ನೂ ಬಗೆಹರಿಯದೆ ಉಳಿದಿವೆ ಎಂದು ಹೇಳಿದರು.

ನಿವೃತ್ತ ನೌಕರರು ಹಾಗೂ ಪಿಂಚಣಿದಾರರಿಗೆ ಆರೋಗ್ಯ ಭಾಗ್ಯ ಯೋಜನೆಯನ್ನು ತಕ್ಷಣ ಜಾರಿಗೆ ತರಬೇಕು. ಕಾಲಮಾನಕ್ಕೆ ತಕ್ಕಂತೆ ನಿವೃತ್ತಿ ವೇತನ ಪರಿಷ್ಕರಣೆ ಮಾಡಿ ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಇದೇ ವೇಳೆ ಸಂಜಾಕಿರಣ ಯೋಜನೆ ಜಾರಿಗೆ ತರಬೇಕು, ವೈದ್ಯಕೀಯ ಚಿಕಿತ್ಸೆಗೆ ಹೆಚ್ಚಿನ ಸೌಲಭ್ಯ ಒದಗಿಸಬೇಕು. 7ನೇ ವೇತನ ಆಯೋಗದ ವರದಿಯಲ್ಲಿ ನಿವೃತ್ತ ನೌಕರರಿಗೆ ಸೂಕ್ತ ಆರ್ಥಿಕ ಸೌಲಭ್ಯ ಕಲ್ಪಿಸಬೇಕು. 70 ರಿಂದ 80 ವರ್ಷದ ನಿವೃತ್ತ ನೌಕರರಿಗೆ ಶೇ.10ರಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಬೇಕು ಎಂದು ಮನವಿ ಮಾಡಿದರು.

ಪಿಂಚಣಿದಾರರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ತರುವುದರ ಜೊತೆಗೆ, ಶವ ಸಂಸ್ಕಾರಕ್ಕೆ ಕನಿಷ್ಠ 10 ಸಾವಿರ ರೂ. ನೆರವು ನೀಡಬೇಕು. ಈ ಸೌಲಭ್ಯಗಳನ್ನು ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟದ ರೂಪುರೇಷೆಗಳನ್ನು ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page