Wednesday, December 24, 2025

ಸತ್ಯ | ನ್ಯಾಯ |ಧರ್ಮ

ಅಕ್ರಮ ಆಸ್ತಿ ಗಳಿಕೆ ಆರೋಪ: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಸರ್ದಾರ್ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಿಗ್ಗೆ ಏಕಕಾಲಕ್ಕೆ ಹತ್ತು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಹಲಸೂರು ಪ್ರದೇಶದಲ್ಲಿರುವ ನಿವಾಸ ಸೇರಿದಂತೆ ಇತರ ಆರು ಮನೆಗಳು, ಕೊಡಗಿನಲ್ಲಿರುವ ಎರಡು ಕಾಫಿ ಎಸ್ಟೇಟ್‌ಗಳು ಹಾಗೂ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಲ್ಲಿರುವ ಒಂದು ರೆಸಾರ್ಟ್ ಮೇಲೆ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಒಟ್ಟು ಏಳು ಮನೆಗಳು ಮತ್ತು ಮೂರು ವಾಣಿಜ್ಯ ಆಸ್ತಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕುರಿತು ಈಗಾಗಲೇ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಸುಮಾರು 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಎಲ್ಲಾ ಹತ್ತು ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ, ಆಸ್ತಿ ವಿವರಗಳ ಸಂಗ್ರಹ ಮತ್ತು ಹಣಕಾಸು ವ್ಯವಹಾರಗಳ ಕುರಿತು ತೀವ್ರ ತನಿಖೆ ಮುಂದುವರಿದಿದೆ. ದಾಳಿ ಅಂತ್ಯವಾದ ಬಳಿಕ ಹೆಚ್ಚಿನ ಮಾಹಿತಿಯನ್ನು ಲೋಕಾಯುಕ್ತ ಅಧಿಕಾರಿಗಳು ಪ್ರಕಟಿಸುವ ನಿರೀಕ್ಷೆಯಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page