Friday, December 26, 2025

ಸತ್ಯ | ನ್ಯಾಯ |ಧರ್ಮ

ಸ್ಥಳೀಯ ಚುನಾವಣೆಗಿಲ್ಲ BJP- JDS ಮೈತ್ರಿ ಇಲ್ಲಾ – ಹೆಚ್.ಡಿ ದೇವೇಗೌಡ 

ಬೆಂಗಳೂರು :  ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಲೋಕಸಭೆ, ವಿಧಾನಸಭೆಗಷ್ಟೇ, ಸ್ಥಳೀಯ ಸಂಸ್ಥೆಗಳ ಚುನಾವಣೆಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ  ಸ್ಪಷ್ಟನೆ ನೀಡಿದ್ದಾರೆ.ಬೆಂಗಳೂರಿನ  ಜೆಡಿಎಸ್  ಭವನದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದಲ್ಲಿ ಜ.23ಕ್ಕೆ ಮತ್ತು ಬೆಂಗಳೂರಿನಲ್ಲಿ ಜ.18 ರಂದು ಸಭೆ ಮಾಡುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಜೊತೆಗೆ ಇರುತ್ತೇವೆ. ಆದರೆ ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್‌ಗೆ 3 ಸ್ಥಾನ ಬಿಜೆಪಿಗೆ ನೀಡುವ ಬಗ್ಗೆ ಪ್ರಾಥಮಿಕ ಚರ್ಚೆ ಆಗಿದೆ ಎಂದು  ತಿಳಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿದ, ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. ಬಿಜೆಪಿಯನ್ನು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಸಂಕಲ್ಪ ಮಾಡಬೇಕಾಗಿದೆ. ರಾಜ್ಯಾಧ್ಯಕ್ಷನಾಗಿ ರಾಜ್ಯ ಪ್ರವಾಸ ಮಾಡಿ ನಾಡಿಮಿಡಿತ ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ 130-140 ಸ್ಥಾನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಹೇಳುವ ಮೂಲಕ ವಿಧಾನಸಭೆ ಮೈತ್ರಿಯನ್ನ ತಳ್ಳಿಹಾಕಿದ್ದಾರೆ. ಈ ಮಧ್ಯೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಹೆಚ್ ಡಿಡಿ, ವಿಜಯೇಂದ್ರಗೆ ಪರೋಕ್ಷ ಟಾಂಗ್ ನೀಡಿದ್ದಾರೆ. ವಿಜಯೇಂದ್ರ ಬಹಳ ಉತ್ಸಾಹದಿಂದ ಓಡಾಡುತ್ತಿದ್ದಾರೆ. ಯಂಗ್ ಸ್ಟಾರ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನೂ ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಮೋದಿ, ಶಾ ಜೊತೆಗೆ ಚರ್ಚೆ ಮಾಡಲು ಆಗಲ್ಲ. ಮೋದಿ, ಶಾ ಜೊತೆಗೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಚರ್ಚೆ ಮಾಡುತ್ತೇವೆಂದು ಹೇಳುವ ಮೂಲಕ ಮೈತ್ರಿ ಇದೆ ಎಂದು ಪುನರುಚ್ಚರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page