Monday, January 19, 2026

ಸತ್ಯ | ನ್ಯಾಯ |ಧರ್ಮ

ಪೋಕ್ಸೋ ಸಂತ್ರಸ್ತೆಯ ಮಾಹಿತಿ ಬಹಿರಂಗ: ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಎಫ್‌ಐಆರ್

ಬಳ್ಳಾರಿ: ಪೋಕ್ಸೋ ಪ್ರಕರಣದ ಸಂತ್ರಸ್ತೆಯ ಹೆಸರು ಹಾಗೂ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಜನವರಿ 17ರಂದು ಬಳ್ಳಾರಿಯಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡುವ ವೇಳೆ ಶ್ರೀರಾಮುಲು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಈ ಸಂದರ್ಭ ಬಳ್ಳಾರಿ ಗಾಂಜಾ ಹಾಗೂ ಡ್ರಗ್ಸ್ ಹಬ್ ಆಗಿದೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸುತ್ತಾ, ಪೋಕ್ಸೋ ಪ್ರಕರಣದ ಸಂತ್ರಸ್ತೆಯ ಹೆಸರು ಹಾಗೂ ಇತರ ಮಾಹಿತಿಗಳನ್ನು ಉಲ್ಲೇಖಿಸಿದ್ದರು ಎನ್ನಲಾಗಿದೆ.

ಪೋಕ್ಸೋ ಕಾಯ್ದೆಯ ಪ್ರಕಾರ ಸಂತ್ರಸ್ತೆಯ ಗುರುತು ಹಾಗೂ ವಿವರಗಳನ್ನು ಗೌಪ್ಯವಾಗಿಡುವುದು ಕಡ್ಡಾಯವಾಗಿದ್ದು, ರಾಜಕೀಯ ಸಮಾವೇಶದಂತಹ ಸಾರ್ವಜನಿಕ ವೇದಿಕೆಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page