Monday, February 2, 2026

ಸತ್ಯ | ನ್ಯಾಯ |ಧರ್ಮ

ಕುರುಬ ಸಮಾಜವನ್ನು ಎಸ್​​​​​​​ಟಿಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ ಮಾಡಿದ್ದೇನೆ – ಸಿಎಂ

ರಾಯಚೂರಿನಲ್ಲಿ (Raichur) ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಬ್ರಹ್ಮಲೀನರಾದ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಭಾಗವಹಿಸಿದರು. ಸಮುದಾಯದ ಕುರಿತು ಮಾತನಾಡಿದ ಅವರು, ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿ , ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಎಲ್ಲ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿಗೆ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಇನ್ನು ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಈ ಮೊದಲು ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಗೊಂಡ ಕುರುಬ ಸಮುದಾಯವನ್ನು ಮಾತ್ರ ಉಲ್ಲೇಖಿಸಿ ಕಳುಹಿಸಿದ್ದೆ. ಈಗ ರಾಜ್ಯದ ಎಲ್ಲ ಕುರುಬ ಸಮುದಾಯವನ್ನು ಉಲ್ಲೇಖಿಸಿ ಶಿಫಾರಸು ಮಾಡಿರುವೆ. ರಾಜ್ಯ ಸರ್ಕಾರದ ಕೈಯಲ್ಲಿದ್ದರೆ ಆಗಲೇ ಎಸ್‌ಟಿಗೆ ಸೇರಿಸಿ ಬಿಡುತ್ತಿದ್ದೆ’ ಎಂದು ತಿಳಿಸಿದರು. ಜಾತಿಗಣತಿ ವರದಿಯನ್ನು ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page