Friday, February 6, 2026

ಸತ್ಯ | ನ್ಯಾಯ |ಧರ್ಮ

ಬೆಂಗಳೂರು ಏರ್ಪೋರ್ಟ್ ನಲ್ಲಿ ಕಳ್ಳತನ : ದುಬೈಗೆ ಹೊರಟಿದ್ದ ಮಹಿಳೆಯ ಲಗೇಜ್‌ನಿಂದ 790 ಗ್ರಾಂ ಚಿನ್ನಾಭರಣ ಮಾಯ

ಬೆಂಗಳೂರು: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳು ಕಳ್ಳತನವಾಗಿರುವ ಗಂಭೀರ ಘಟನೆ ವರದಿಯಾಗಿದೆ.

ಬೆಂಗಳೂರಿನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಲಗೇಜ್ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಹಾಗೂ ವಜ್ರಾಭರಣಗಳು ನಾಪತ್ತೆಯಾಗಿವೆ ಎಂದು ಆರೋಪಿಸಲಾಗಿದೆ. ಮಹಿಳೆ ಚೆಕ್-ಇನ್ ಪ್ರಕ್ರಿಯೆಯ ವೇಳೆ ಚಿನ್ನಾಭರಣಗಳನ್ನು ತೋರಿಸಿ, ಬ್ಯಾಗ್‌ಗೆ ಟ್ಯಾಗ್ ಮಾಡಿಸಿದ್ದರು. ಆದರೆ ಲಗೇಜ್ ದುಬೈ ತಲುಪುವ ವೇಳೆಗೆ ಚಿನ್ನ ಮತ್ತು ವಜ್ರಾಭರಣಗಳು ಸಂಪೂರ್ಣವಾಗಿ ಮಾಯವಾಗಿರುವುದು ಬೆಳಕಿಗೆ ಬಂದಿದೆ.

ಮಹಿಳೆಯ ದೂರಿನ ಪ್ರಕಾರ, ಬ್ಯಾಗ್‌ನಲ್ಲಿ ಸುಮಾರು 790 ಗ್ರಾಂ ಚಿನ್ನಾಭರಣ ಹಾಗೂ ಸುಮಾರು 8 ಲಕ್ಷ ರೂ. ಮೌಲ್ಯದ ವಜ್ರಾಭರಣಗಳು ಇದ್ದವು. ಇವುಗಳೆಲ್ಲವೂ ಕಳ್ಳತನವಾಗಿವೆ ಎಂದು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಏರ್‌ಪೋರ್ಟ್ ಸಿಬ್ಬಂದಿಯ ಪಾತ್ರದ ಕುರಿತು ಶಂಕೆ ವ್ಯಕ್ತವಾಗಿದ್ದು, ಬೆಂಗಳೂರು ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸುತ್ತಿದ್ದು, ಲಗೇಜ್ ಹ್ಯಾಂಡ್ಲಿಂಗ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಸಿಬ್ಬಂದಿಯ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page