Monday, February 9, 2026

ಸತ್ಯ | ನ್ಯಾಯ |ಧರ್ಮ

ಬ್ರಾಹ್ಮಣರ ಅಭಿವೃದ್ಧಿಗೆ ಅತಿಹೆಚ್ಚು ಹಣ ನೀಡಿರುವುದು ಕಾಂಗ್ರೆಸ್‌ ಆಡಳಿತ:‌ ದಿನೇಶ್‌ ಗುಂಡೂರಾವ್

ಕಲಬುರಗಿ: ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹೆಚ್ಚು ಹಣ ಕೊಟ್ಟಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.

ಬಿಜೆಪಿಯವರು ಕೇವಲ ತಾವು ಬ್ರಾಹ್ಮಣರ ಪರ ಎಂದು ಹೇಳಿಕೊಳ್ಳುತ್ತಾರೆಯೇ ಹೊರತು, ಅವರು ಅಧಿಕಾರದಲ್ಲಿದ್ದಾಗ ನಿಗಮಕ್ಕೆ ಎಷ್ಟು ಅನುದಾನ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸಚಿವರು ಸವಾಲು ಹಾಕಿದರು.

ಇದರ ಜೊತೆಗೆ ದೇವಸ್ಥಾನಗಳಲ್ಲಿ ಪೂಜೆ ಮಾಡುವ ಅರ್ಚಕರಿಗೆ ಸರ್ಕಾರವು ಮಾಸಿಕವಾಗಿ 12 ಸಾವಿರ ರೂ.ಗಳನ್ನು ನೀಡುತ್ತಿದೆ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ಕುರಿತಾದ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಈಗಾಗಲೇ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಹೇಳಿದ್ದಾರೆ ಮತ್ತು ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಅಧಿಕಾರ ಹಸ್ತಾಂತರದ ಕುರಿತು ಯಾರೂ ಮಾತನಾಡಬಾರದು ಎಂದು ಸೂಚನೆ ನೀಡಲಾಗಿದ್ದು, ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದು ಅವರು ವಿವರಿಸಿದರು. ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಯತೀಂದ್ರ ಅವರ ಹೇಳಿಕೆಯು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page