Tuesday, February 10, 2026

ಸತ್ಯ | ನ್ಯಾಯ |ಧರ್ಮ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್: ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಬರಹ ಹೊಂದಿದ್ದ ಬ್ಯಾನರ್ ಅನ್ನು ವಿಧಾನಸೌಧದ ಎದುರು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಕುರಿತು ಬಿಜೆಪಿ ಪಕ್ಷ ದೂರು ದಾಖಲಿಸಿದ್ದು, ಬಿಜೆಪಿ ಮುಖಂಡರ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬ್ಯಾನರ್ ಅನ್ನು ಕಾನೂನುಬಾಹಿರವಾಗಿ ಅಳವಡಿಸಲಾಗಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವಹೇಳನಕಾರಿ ಮತ್ತು ಉದ್ರೇಕಕಾರಿ ಬರಹ ಇತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ಮೋದಿ ಅವರ ಭಾವಚಿತ್ರ ಬಳಸಿಕೊಂಡು ಅವಹೇಳನಕಾರಿ ಸಂದೇಶದ ಮೂಲಕ ಅವರ ತೇಜೋವಧೆ ಮಾಡಲು ಹಾಗೂ ಸಾರ್ವಜನಿಕ ಅಶಾಂತಿ ಉಂಟುಮಾಡಲು ಯತ್ನಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕೃತ್ಯದ ಹಿಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಕೆಲ ಪದಾಧಿಕಾರಿಗಳು ಇದ್ದಾರೆ ಎಂಬ ಆರೋಪವೂ ದೂರಿನಲ್ಲಿ ಮಾಡಲಾಗಿದೆ.

ರಾಜ್ಯದಲ್ಲಿ ರಾಜಕೀಯ ಉದ್ರೇಕ ಹಾಗೂ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ಬ್ಯಾನರ್ ಅಳವಡಿಸಲಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದು, ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬ್ಯಾನರ್ ಅಳವಡಿಕೆಯ ಹಿನ್ನೆಲೆ, ಭಾಗಿಯಾದವರು ಯಾರು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page