Thursday, February 19, 2026

ಸತ್ಯ | ನ್ಯಾಯ |ಧರ್ಮ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4.7 ಕೆಜಿ ಕೊಕೇನ್ ವಶ; ಬ್ರೆಜಿಲ್ ಪ್ರಜೆ ಬಂಧನ

Narcotics Control Bureau (ಎನ್‌ಸಿಬಿ) ಬೆಂಗಳೂರು ವಲಯ ಘಟಕದ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಂಡು ಬ್ರೆಜಿಲ್ ಪ್ರಜೆಯೊಬ್ಬರನ್ನು ಬಂಧಿಸಿದ್ದಾರೆ.

ಫೆಬ್ರವರಿ 17ರಂದು ನಡೆದ ತಪಾಸಣೆ ವೇಳೆ ಆರೋಪಿಯ ಚೆಕ್-ಇನ್ ಲಗೇಜ್ ಪರಿಶೀಲಿಸಿದಾಗ 4.776 ಕೆಜಿ ಕೊಕೇನ್ ಪತ್ತೆಯಾಗಿದೆ. ವಶಪಡಿಸಿಕೊಂಡಿರುವ ಮಾದಕ ವಸ್ತುವಿನ ಅಂದಾಜು ಮೌಲ್ಯ ಸುಮಾರು 23.88 ಕೋಟಿ ರೂಪಾಯಿ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿ ಬ್ರೆಜಿಲ್‌ನ ಸಾವೊ ಪಾಲೊದಿಂದ ಕತಾರ್‌ನ ದೋಹಾಗೆ ಪ್ರಯಾಣಿಸಿ, ಅಲ್ಲಿಂದ ಬೆಂಗಳೂರಿಗೆ ಬಂದಿದ್ದಾನೆ. ತಪಾಸಣೆ ವೇಳೆ ನಾಲ್ಕು ಮಹಿಳೆಯರ ಕೈಚೀಲಗಳಲ್ಲಿ ಅಡಗಿಸಿಟ್ಟಿದ್ದ ಕೊಕೇನ್ ಪತ್ತೆಯಾಗಿರುವುದು ಅಧಿಕಾರಿಗಳಿಗೆ ಅನುಮಾನ ಮೂಡಿಸಿದ ಬಳಿಕ ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಡ್ರಗ್ಸ್ ಕಳ್ಳಸಾಗಣೆ ಯತ್ನದ ಮೂಲ, ಸಂಪರ್ಕ ಜಾಲ ಮತ್ತು ಗಮ್ಯಸ್ಥಾನದ ಕುರಿತು ಹೆಚ್ಚಿನ ಮಾಹಿತಿಗಾಗಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ Narcotic Drugs and Psychotropic Substances Act (ಎನ್‌ಡಿಪಿಎಸ್ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಮಾದಕ ದ್ರವ್ಯ ಕಳ್ಳಸಾಗಣೆ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿರುವ ಹಿನ್ನೆಲೆ, ಎನ್‌ಸಿಬಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಹಾಗೂ ನಿಗಾವಹಿಸುವ ಕ್ರಮಗಳನ್ನು ಮತ್ತಷ್ಟು ಬಲಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page