Saturday, February 28, 2026

ಸತ್ಯ | ನ್ಯಾಯ |ಧರ್ಮ

ಬಾಲಕಿ ಮೇಲೆ ಅನುಚಿತ ವರ್ತನೆ: ಕೇಸ್ ರದ್ದುಪಡಿಸುವಂತೆ ಕೋರ್ಟ್ ಮೊರೆ ಹೋದ ಮಲ್ಲಿಕಾರ್ಜುನ ಮುತ್ಯಾ

ಬೆಂಗಳೂರು/ಕಲಬುರಗಿ: ಬಾಲಕಿಯೊಬ್ಬಳ ಮೇಲೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ನ ಕಲಬುರಗಿ ಪೀಠದ ಮೊರೆ ಹೋಗಿದ್ದಾನೆ.

ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೀಡಿದ ದೂರಿನ ಮೇರೆಗೆ ಗೋಗಿ ಪೊಲೀಸ್ ಠಾಣೆಯಲ್ಲಿ ಮುತ್ತಪ್ಪ ವಿರುದ್ಧ ಪೋಕ್ಸೋ (POCSO) ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ನ್ಯಾಯಾಲಯವು ಮಾರ್ಚ್ 2ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಅಲ್ಪಕಾಲದಲ್ಲೇ ಸ್ವಾಮೀಜಿಯಾಗಿ ಗುರುತಿಸಿಕೊಂಡು ಜನರ ನಂಬಿಕೆ ಗಳಿಸಿದ್ದ ಮುತ್ಯಾ, ಬಾಲಕಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾದ ದೃಶ್ಯಗಳು ವೈರಲ್ ಆಗಿದ್ದವು. ಇದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದಲ್ಲದೆ, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವಂತೆ ಮಾಡಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page