ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪುರುಷಪ್ರಧಾನ ಹೇರಿರುವ ಕಟ್ಟಳೆಗಳೆಗಳಿಂದ ಹೊರಬರಬೇಕು – ಆರ್. ಸುನಂದಮ್ಮ

ಪುರುಷಪ್ರಧಾನ ಹೇರಿರುವ ಕಟ್ಟಳೆಗಳೆಗಳಿಂದ ಹೊರಬರಬೇಕು – ಆರ್. ಸುನಂದಮ್ಮ

ಹಾಸನ: ಅಧೀನತೆಯಿಂದ ಮಹಿಳೆಯರು ಮುಕ್ತರಾಗಬೇಕಿದ್ದು, ಕೇವಲ ಪುರುಷರ ಅಧೀನತೆಯಿಂದಷ್ಟೇ ಅಲ್ಲದೆ ಸಮಾಜ ಹೇರಿರುವ ಕಟ್ಟಳೆಗಳ ಅಧೀನತೆಯಿಂದಲೂ ಹೊರಬರಬೇಕು. ಅದಕ್ಕಾಗಿ ಮಹಿಳೆಯರು ನಿತ್ಯ ಜಾಗೃತರಾಗಬೇಕು ಹಾಗೂ ಚರ್ಚೆ–ಸಂವಾದಗಳನ್ನು ನಡೆಸಬೇಕು ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಆರ್. ಸುನಂದಮ್ಮ ಹೇಳಿದರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಆಯೋಜಿಸಿದ್ದ ಎರಡನೇ ದಿನದ “ಮಹಿಳಾ ದೌರ್ಜನ್ಯ: ಸವಾಲುಗಳು, ಬಿಡುಗಡೆಯ ಸಾಧ್ಯತೆಗಳು” ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುದ್ಧ ಯೋಧರನ್ನು ಹುಟ್ಟುಹಾಕಿದ್ದು ಮಹಿಳೆಯರೇ. ಆದರೆ ಇಂದಿಗೂ ಮಹಿಳೆಯರೇ ಅನೇಕ ರೀತಿಯ ನೋವು ಅನುಭವಿಸುತ್ತಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿಯೇ ಮಹಿಳೆಯರನ್ನು ಅಂಚಿನಲ್ಲಿರಿಸಲಾಯಿತು. ಅಂದಿನಿಂದ ಇಂದಿನವರೆಗೆ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಲೇ ಬಂದಿದ್ದಾರೆ ಎಂದು ಹೇಳಿದರು.

ಇಂದಿಗೂ ಕೌಟುಂಬಿಕ ಹಿಂಸಾಚಾರ ನಡೆಯುತ್ತಿದ್ದು, ದೂರು ನೀಡಿದ ನಂತರವೂ ಪ್ರಕರಣಗಳ ವಿಚಾರಣೆಯಲ್ಲಿ ಪುರುಷಪ್ರಧಾನ ಮನೋಭಾವ ಹೊಂದಿರುವವರು ಇದ್ದರೆ ನಿರೀಕ್ಷಿತ ನ್ಯಾಯ ದೊರಕುವುದು ಕಷ್ಟವಾಗುತ್ತದೆ. ‘ಪುರುಷ ಹೇಳಿದಂತೆ ಕೇಳಬೇಕು’ ಎಂಬ ಪುರುಷಪ್ರಧಾನ ಮೌಲ್ಯಗಳ ವಿರುದ್ಧ ಮಹಿಳೆಯರು ಹೋರಾಡಬೇಕಿದೆ ಎಂದು ತಿಳಿಸಿದರು.

ಹೈದರಾಬಾದ್‌ನ ಮೌಲಾನಾ ಅಜಾದ್ ವಿಶ್ವವಿದ್ಯಾಲಯದ ಪ್ರೊ. ಶಾಹಿದಾ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆ ಇನ್ನೂ ಹೆಚ್ಚಾಗುತ್ತಿರುವುದು ಆತಂಕಕಾರಿ. ಇದಕ್ಕೆ ಮೂಲ ಕಾರಣ ಪುರುಷಪ್ರಧಾನ ಮನೋಭಾವವೇ ಎಂದು ಹೇಳಿದರು. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕಾನೂನು ಅರಿವು ಕಡಿಮೆ, ಶಿಕ್ಷಣದ ಕೊರತೆ ಹಾಗೂ ರಾಜಕೀಯ ತಿಳುವಳಿಕೆ ಅಭಾವವಿದೆ. ಆದ್ದರಿಂದ ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ಹಕ್ಕುಗಳ ಕುರಿತು ಜಾಗೃತಿ ಮೂಡಿಸಿ, ಹೋರಾಟಕ್ಕೆ ಅವರನ್ನು ಅಣಿ ನೆರೆಸಬೇಕು ಎಂದು ಕರೆ ನೀಡಿದರು. ಮಹಿಳೆಯರ ಮೇಲೆ ತಾಳಿ, ಕಾಲುಂಗರ, ಕುಂಕುಮ ಧರಿಸುವುದು, ಗಂಡ ಸತ್ತ ನಂತರ ಬಿಳಿ ಸೀರೆ ಧರಿಸುವುದು ಮುಂತಾದ ಸಂಪ್ರದಾಯಗಳನ್ನು ಹೇರಲಾಗಿದೆ. ಆದರೆ ಗಂಡಸರ ಮೇಲೆ ಇಂತಹ ನಿಯಮಗಳಿಲ್ಲ. ಮುಸ್ಲಿಂ ಸಮುದಾಯದಲ್ಲಿ ತಲಾಖ್ ಮೂಲಕ ಗಂಡಸರು ಮಹಿಳೆಯರನ್ನು ವಸ್ತುವಿನಂತೆ ನೋಡುತ್ತಿರುವುದು ಕೂಡ ಪ್ರಶ್ನಾರ್ಥಕವಾಗಿದೆ. ಇಂತಹ ಸಂಪ್ರದಾಯಗಳು ಎಷ್ಟು ನ್ಯಾಯಸಮ್ಮತ ಎಂಬುದನ್ನು ಮಹಿಳೆಯರು ಪ್ರಶ್ನಿಸಬೇಕು ಹಾಗೂ ಅವುಗಳ ಅಗತ್ಯವಿಲ್ಲ ಎಂಬುದನ್ನು ಕುಟುಂಬಗಳಿಗೆ ಮನವರಿಕೆ ಮಾಡಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ‘ಕೂಡಿ ಕಟ್ಟುವಾ ನ್ಯಾಯದ ಜಗವಾ’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿ. ಸೌಭಾಗ್ಯ ವಹಿಸಿದ್ದರು. ವೇದಿಕೆಯಲ್ಲಿ ಜಯಲಕ್ಷ್ಮಿ ಮುನಿವೆಂಕಟೇಗೌಡ, ತಾರಾಸ್ವಾಮಿ, ಡಾ. ಶೈಲಜಾ ಕರ್ಕಡ, ಗೀತಾ ಕಿರಣ್, ಡಾ. ಟಿ.ಎಂ. ಉಷಾರಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು