Thursday, March 19, 2026

ಸತ್ಯ | ನ್ಯಾಯ |ಧರ್ಮ

ದಾವಣಗೆರೆಯಲ್ಲಿ ಅಚ್ಚರಿ ಅಭ್ಯರ್ಥಿ: ರಾಜ್ಯದ ಎರಡು ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಕೇಂದ್ರೀಯ ಆಯ್ಕೆ ಸಮಿತಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಯುಗಾದಿ ಹಬ್ಬದ ದಿನವೇ ಪಟ್ಟಿಯನ್ನು ಪ್ರಕಟಿಸಿರುವುದು ಗಮನಾರ್ಹವಾಗಿದೆ.

ಬಾಗಲಕೋಟೆ ಕ್ಷೇತ್ರದಿಂದ ವೀರಭದ್ರಯ್ಯ ಚರಂತಿಮಠ ಅವರಿಗೆ ಟಿಕೆಟ್ ನೀಡಲಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶ್ರೀನಿವಾಸ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ವಿಶೇಷವಾಗಿ ದಾವಣಗೆರೆಯಲ್ಲಿ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದು ಸ್ಥಳೀಯ ಬಿಜೆಪಿ ಘಟಕದಲ್ಲಿ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನ ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ. ಮೇಟಿ ಅವರ ನಿಧನದಿಂದ ಉಪಚುನಾವಣೆ ಘೋಷಣೆಯಾಗಿದೆ.

ಈ ಎರಡೂ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ವೇಳೆ, ಕರ್ನಾಟಕದ ಜೊತೆಗೆ ಗೋವಾ, ನಾಗಾಲ್ಯಾಂಡ್ ಮತ್ತು ತ್ರಿಪುರಾದ ತಲಾ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page