ಹಾಸನ ಸಿಲಿಂಡರ್ ಅನಿಲ ಸೋರಿಕೆ, ಭೀಕರ ಸ್ಫೋಟಕ್ಕೆ ನಾಲ್ವರು ಗಂಭೀರ

ಹಾಸನ : ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು (gas cylinder) ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ (injury) ಭೀಕರ ಘಟನೆ (Tragedy) ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಅಡುಗೆ ಮಾಡುವ ಸಂದರ್ಭಯದಲ್ಲಿ ಸಿಲಿಂಡರ್‌ನಲ್ಲಿದ್ದ ಗ್ಯಾಸ್ ಖಾಲಿಯಾಗಿದೆ. ಈ ವೇಳೆ ಹೊಸ ಸಿಲಿಂಡರ್ ಅಳವಡಿಸಲು ಮುಂದಾದಾಗ, ರೆಗ್ಯುಲೇಟರ್ ಸರಿಯಾಗಿ ಕುಳಿತುಕೊಳ್ಳದೆ. ಅನಿಲಸೋರಿಕೆಯಾಗಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಅನಿಲ ಹರಡಿ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ತಾಯಿ, ಮಗ ಸೇರಿದಂತೆ ಒಟ್ಟು ನಾಲ್ವರಿಗೆ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಗಾಯಾಳುಗಳನ್ನು ಕೋಣನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಸುಂದರೇಶ್ ಎಂಬುವವರ ಮನೆಗೆ ಅಪಾರ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಕೋಣನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು