ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಣೆ – ಶಾಸಕ ಸ್ವರೂಪ್‌ ಗರಂ

ಹಾಸನ: ನಗರದ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಣೆಗೆ ಸಂಬಂಧ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ವಾರ್ಡನ್ ವಿರುದ್ಧ ಕಠಿಣ ಕ್ರಮ ಗೈಳ್ಳುವಂತೆ ಸೂಚನೆ ನೀಡಿದ್ದಾರೆ. ಬುಧವಾರ ಶಾಸಕರ ಗೃಹ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಸತಿ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಸತಿನಿಲಯಗಳ ವಾರ್ಡನ್‌ಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಇದೇ ವೇಳೆ, “ಯಾವ ವಾರ್ಡನ್ ವಿದ್ಯಾರ್ಥಿಗೆ ಊಟ ನೀಡಲು ನಿರಾಕರಿಸಿದ್ದಾರೋ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು. Hassan

ಬುಧವಾರ ಶಾಸಕರ ಗೃಹ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಸತಿ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಸತಿನಿಲಯಗಳ ವಾರ್ಡನ್‌ಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಹಾಸ್ಟೆಲ್ ವಿದ್ಯಾರ್ಥಿಗೆ ಊಟ ನಿರಾಕರಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಇದೇ ವೇಳೆ, “ಯಾವ ವಾರ್ಡನ್ ವಿದ್ಯಾರ್ಥಿಗೆ ಊಟ ನೀಡಲು ನಿರಾಕರಿಸಿದ್ದಾರೋ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು” ಎಂದು ಸ್ಪಷ್ಟ ಸೂಚನೆ ನೀಡಿದರು.

ವಸತಿನಿಲಯಗಳು ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಇರುವವು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಆಹಾರ ಸೇರಿದಂತೆ ಮೂಲಭೂತ ಸೌಲಭ್ಯಗಳಲ್ಲಿ ಕೊರತೆ ಉಂಟಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಅವರು, “ಈ ರೀತಿಯ ಘಟನೆಗಳು ಸಮಾಜದಲ್ಲಿ ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು. ಇದೇ ಸಂದರ್ಭದಲ್ಲಿ, ನಗರ ಮತ್ತು ಗ್ರಾಮೀಣ ಪ್ರದೇಶಗಳ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ವಾರ್ಡನ್‌ಗಳಿಗೆ ವಿಶೇಷ ಸೂಚನೆ ನೀಡಿದರು.

ಸಭೆಯಲ್ಲಿ ಸಂಬಂಧಿತ ಮೂರು ಇಲಾಖೆಗಳ ಅಧಿಕಾರಿಗಳು ಹಾಗೂ ವಸತಿನಿಲಯಗಳ ವಾರ್ಡನ್‌ಗಳು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು