ದಲಿತ ಎಂದು ಸ್ವಾಮೀಜಿಯನ್ನ ದೇವಸ್ಥಾನದಿಂದ ಹೊರಹಾಕಿದ ಆಡಳಿತ ಮಂಡಳಿ

ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಪ್ರಸಿದ್ಧ ಯಾನಾಗುಂದಿಯ ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ (Kalburgi)  ದಲಿತ ಎಂಬ ಕಾರಣಕ್ಕೆ ಸ್ವಾಮೀಜಿಯೊಬ್ಬರ ಮೇಲೆ ಹಲ್ಲೆ (Crime) ನಡೆಸಿ, ಅವರನ್ನು ದೇವಸ್ಥಾನದಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

7 -8 ವರ್ಷಗಳಿಂದ ಸೇವೆ ಮಾಡುತ್ತಿದ್ದ ಸ್ವಾಮೀಜಿ

ತೆಲಂಗಾಣ ಮೂಲದ ಬಂಡಿ ಬಾಲಕೃಷ್ಣ ಎಂಬುವವರೇ ಈ ಹಲ್ಲೆಗೆ ಒಳಗಾದ ದುರ್ದೈವಿ. ಕಳೆದ 7-8 ವರ್ಷಗಳಿಂದ ಇದೇ ದೇವಸ್ಥಾನದಲ್ಲಿ ನೆಲೆಸಿದ್ದ ಇವರು ಭಕ್ತಿಯಿಂದ ಸೇವೆ ಸಲ್ಲಿಸುತ್ತಿದ್ದರು. ಆದರೆ, ದೇವಸ್ಥಾನದ ಟ್ರಸ್ಟಿಗಳು ಇವರ ಜಾತಿಯನ್ನು ನೆಪವಾಗಿಟ್ಟುಕೊಂಡು ಅವಮಾನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಶಿವಯ್ಯ ಮತ್ತು ಅವರ ಪುತ್ರ ಸುಮನ್ ಅವರು ಬಂಡಿ ಬಾಲಕೃಷ್ಣ ಅವರನ್ನು ದೇವಸ್ಥಾನದಿಂದ ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. “ಕೆಳಜಾತಿಯವರು ದೇವಸ್ಥಾನ ಪ್ರವೇಶಿಸಬಾರದು” ಎಂದು ನಿಂದಿಸಿರುವ ಟ್ರಸ್ಟಿಗಳು, ಈ ಹಿಂದೆಯೂ ಹಲವು ಬಾರಿ ದೈಹಿಕವಾಗಿ ಉಪದ್ರವ ನೀಡಿದ್ದರು ಎನ್ನಲಾಗಿದೆ. ದಲಿತ ಸಮುದಾಯಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ಸ್ವಾಮೀಜಿಯವರನ್ನು ಹೀನಾಯವಾಗಿ ನಡೆಸಿ ಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ದೇವಸ್ಥಾನದಲ್ಲಿ ದಲಿತ ಯುವಕರ ಮೇಲೆ ಹಲ್ಲೆ, ಯಾದಗಿರಿಯಲ್ಲಿ ಅಮಾನವೀಯ ಘಟನೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದ್ದು, ದೇವಸ್ಥಾನದ (Temple) ಕಟ್ಟೆಯ ಮೇಲೆ ಕುಳಿತಿದ್ದ ಕಾರಣಕ್ಕೆ ದಲಿತ (Dalit) ಸಮುದಾಯದ ಯುವಕರ (Youths) ಮೇಲೆ ಹಲ್ಲೆ (Assault) ನಡೆಸಲಾಗಿದೆ. ಗ್ರಾಮದ ಜಾತ್ರೆಯ ಸಂದರ್ಭದಲ್ಲಿ ಈ ಅಹಿತಕರ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಇಲ್ಲಿನ ಸ್ಥಳೀಯ ದೇವಸ್ಥಾನದ ಆವರಣದಲ್ಲಿ ಕುಳಿತಿದ್ದ ಯುವಕರನ್ನು ಕಂಡು ಕೆರಳಿದ ಮೇಲ್ವರ್ಗದ ಕೆಲವರು, ಅವರನ್ನು ಅಲ್ಲಿಂದ ಎದ್ದು ಹೋಗುವಂತೆ ಧಮಕಿ ಹಾಕಿದ್ದಾರೆ. ಕೇವಲ ಮಾತಿನ ಚಕಮಕಿಯಷ್ಟೇ ಅಲ್ಲದೆ, ಯುವಕರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಯುವಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ (SC/ST Act) ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು