ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲುಗೆ ಅನುಮೋದನೆ

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಎರಡು ಮಹಾನಗರಗಳ ನಡುವೆ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಅನುಮೋದನೆ ನೀಡಲಾಗಿದೆ.

ಈ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ವರೆಗೆ ಸಂಚರಿಸಲಿದ್ದು, ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.

ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ ಸಿ ಮೋಹನ್ ಅವರ ನಿರಂತರ ಪ್ರಯತ್ನ ಮತ್ತು ಮನವಿಯ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವಾಲಯವು ಈ ಯೋಜನೆಗೆ ಹಸಿರು ನಿಶಾನೆ ತೋರಿಸಿದೆ ಎಂದು ತಿಳಿದುಬಂದಿದೆ.

ವಂದೇ ಭಾರತ್ ಸ್ಲೀಪರ್ ರೈಲುಗಳು ರಾತ್ರಿ ಪ್ರಯಾಣಕ್ಕೆ ಅನುಕೂಲಕರವಾಗಿದ್ದು, ಪ್ರಯಾಣಿಕರಿಗೆ ವಿಶ್ವದರ್ಜೆಯ ಸೌಲಭ್ಯಗಳು, ಸುಧಾರಿತ ಸುರಕ್ಷತಾ ವ್ಯವಸ್ಥೆ ಹಾಗೂ ಆರಾಮದಾಯಕ ವ್ಯವಸ್ಥೆಗಳನ್ನು ಒದಗಿಸಲಿವೆ.

ಈ ಹೊಸ ರೈಲು ಸೇವೆಯಿಂದ ಐಟಿ ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲ ದೊರೆಯಲಿದ್ದು, ಬೆಂಗಳೂರು–ಮುಂಬೈ ನಡುವಿನ ವಾಣಿಜ್ಯ ಮತ್ತು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ಸಿಗುವ ಸಾಧ್ಯತೆ ಇದೆ.

Related Articles

ಇತ್ತೀಚಿನ ಸುದ್ದಿಗಳು