ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಪ‍ಠ್ಯಪುಸ್ತಕ ಉಚಿತ

ಬೆಂಗಳೂರು : ರಾಜ್ಯ ಸರ್ಕಾರ(Government )ಪಿಯುಸಿ ವಿದ್ಯಾರ್ಥಿಗಳಿಗೆ (puc students ) ಗುಡ್​ ನ್ಯೂಸ್​ ನೀಡಿದೆ. 2026–27ನೇ ಸಾಲಿನಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡಲು ನಿರ್ಧಾರ ಮಾಡಿದೆ.

ಉಚಿತ ಪಠ್ಯಪುಸ್ತಕ ಯೋಜನೆ 10ನೇ ತರಗತಿಯವರೆಗೆ ಮಾತ್ರ ಸೀಮಿತವಾಗಿತ್ತು. ಈಗ ಈ ಯೋಜನೆಯನ್ನು ಪಿಯು ಮಟ್ಟಕ್ಕೂ ವಿಸ್ತರಿಸಲಾಗುತ್ತಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಬಹಳ ದೊಡ್ಡ ಅನುಕೂಲವಾಗಲಿದೆ.

ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ಪೋಷಕರಿಗೆ ಮಕ್ಕಳ ಶಿಕ್ಷಣ ವೆಚ್ಚ ದೊಡ್ಡ ಸಮಸ್ಯೆಯಾಗಿರುತ್ತದೆ. ಹೀಗಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡುವ ನಿರ್ಧಾರ ಕೈಗೊಂಡಿದೆ.

ಕರ್ನಾಟಕದಲ್ಲಿ ಪ್ರಸ್ತುತ 1,319 ಸರ್ಕಾರಿ ಪಿಯು ಕಾಲೇಜುಗಳು ಮತ್ತು 815 ಅನುದಾನಿತ ಪಿಯು ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಯೋಜನೆಯಡಿ ಒಟ್ಟು 34 ವಿಷಯಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತದೆ.

1ರಿಂದ 12ನೇ ತರಗತಿಯವರೆಗಿನ ಪಠ್ಯಪುಸ್ತಕಗಳು ಮತ್ತು ಕಾರ್ಯಪುಸ್ತಕಗಳ ವಿತರಣೆಗೆ ಶಿಕ್ಷಣ ಇಲಾಖೆ ಒಟ್ಟು 30.83 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಸರ್ಕಾರ ಈಗ ಈ ಮೊತ್ತವನ್ನು ಅನುಮೋದಿಸಿದ್ದು, ಯೋಜನೆ ಜಾರಿಗೆ ಬರುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು