ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಉಸ್ತುವಾರಿ: 40 ಸಾಂಸ್ಥಿಕ ಜಿಲ್ಲೆಗಳಿಗೆ ವೀಕ್ಷಕರನ್ನು ನೇಮಿಸಿದ ಕೆಪಿಸಿಸಿ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC)ಯು ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ವಿದ್ಯಮಾನಗಳ ಉಸ್ತುವಾರಿಗಾಗಿ ರಾಜ್ಯದ 44 ಸಾಂಸ್ಥಿಕ ಜಿಲ್ಲೆಗಳಿಗೆ ವೀಕ್ಷಕರನ್ನು ನೇಮಕ ಮಾಡಿದೆ.

“ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರನ್ನು ಕೆಪಿಸಿಸಿ ಆಡಳಿತ ಪ್ರಭಾರಿಯಾಗಿ ನೇಮಕ ಮಾಡಲಾಗಿದೆ” ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವೀಕ್ಷಕರ ಪಟ್ಟಿಯಲ್ಲಿ ಮಾಜಿ ಸಂಸದರಾದ ವಿ.ಎಸ್. ಉಗ್ರಪ್ಪ ಮತ್ತು ಎಸ್.ಪಿ. ಮುದ್ದಹನುಮೇಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಪ್ರೊ. ಎಂ.ವಿ. ರಾಜೀವ್ ಗೌಡ, ಮನ್ಸೂರ್ ಅಲಿ ಖಾನ್, ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ಇ. ತುಕರಾಮ್, ಸುನಿಲ್ ಬೋಸ್ ಮತ್ತು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಒಳಗೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು