ಅಮೆರಿಕಾದ ವರ್ಜೀನಿಯಾ ಸೂಪರ್ ಮಾರ್ಕೆಟ್‌ನಲ್ಲಿ ಗುಂಡಿನ ದಾಳಿ; ಭಾರತೀಯ ಮೂಲದ ಮಹಿಳೆ ಸಾವು

ವಾಷಿಂಗ್ಟನ್: ಅಮೆರಿಕಾದ ವರ್ಜೀನಿಯಾ ರಾಜ್ಯದ ಸೂಪರ್ ಮಾರ್ಕೆಟ್ ಒಂದರಲ್ಲಿ ಮೇ 23 ರಂದು (ಶನಿವಾರ) ಗುಜರಾತ್ ಮೂಲದ ಭಾರತೀಯ ಮಹಿಳೆಯೊಬ್ಬರನ್ನು ದುಷ್ಕರ್ಮಿಯೊಬ್ಬ ದಾರುಣವಾಗಿ ಗುಂಡಿಕ್ಕಿ ಕೊಂದಿದ್ದಾನೆ.

ಮೃತರನ್ನು ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಜಂತ್ರಾಲ್ ಗ್ರಾಮದ ಮೇಘನಾ ಪಟೇಲ್ ಎಂದು ಗುರುತಿಸಲಾಗಿದೆ. ಮೇಘನಾ ಅವರು ಸೂಪರ್ ಮಾರ್ಕೆಟ್ ಅಂಗಡಿಯ ಒಳಗಿದ್ದಾಗ, ಗ್ರಾಹಕನ ಸೋಗಿನಲ್ಲಿ ಒಳಗೆ ಬಂದ ಅಪರಿಚಿತ ದುಷ್ಕರ್ಮಿಯೊಬ್ಬ ಕ್ಷಣಾರ್ಧದಲ್ಲಿ ಅವರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಇಡೀ ಕೃತ್ಯದ ಭೀಕರ ದೃಶ್ಯಗಳು ಸೂಪರ್ ಮಾರ್ಕೆಟ್‌ನ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪ್ರಸ್ತುತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೊರಬಂದಿದೆ. ದರೋಡೆ ಮಾಡುವ ಉದ್ದೇಶದಿಂದಲೇ ದುಷ್ಕರ್ಮಿ ಈ ಕೃತ್ಯ ಎಸಗಿರಬಹುದು ಎಂದು ಸ್ಥಳೀಯ ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಸದ್ಯ ವರ್ಜೀನಿಯಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು