ಹಾಸನನಲ್ಲಿ ತುಂತುರು ಮಳೆ, ಮುಂಗಾರು ಮುಂದುವರಿದರೆ ಗುಡ್ಡ ಕುಸಿತ ಸಾದ್ಯತೆ

ಸಕಲೇಶಪುರ : ಕಳೆದ ಒಂದು ವಾರದಿಂದ ಬಿಸಿಲಿನ ವಾತಾವರಣಕ್ಕೆ ತತ್ತರಿಸಿದ್ದ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ತುಂತುರು ಮಳೆ ಸುರಿದಿದೆ. ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವೆಡೆ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಮಳೆಯ ಪರಿಣಾಮ ಸಕಲೇಶಪುರ ತಾಲ್ಲೂಕಿನ ಚಿಕ್ಕಂದೂರು ಗ್ರಾಮದಲ್ಲಿ ರಸ್ತೆ ಮೇಲೆ ಮಣ್ಣು ಕುಸಿಯಲು ಆರಂಭವಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಚಿಕ್ಕಂದೂರು–ಶನಿವಾರಸಂತೆ, ಕೂಡರಸ್ತೆ ಹಾಗೂ ಕೆರೋಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಬದಿಯ ಮಣ್ಣು ಕುಸಿದು ರಸ್ತೆ ಮೇಲೆ ಬೀಳುತ್ತಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಮಳೆ ಮುಂದುವರಿದರೆ ರಸ್ತೆ ಇನ್ನಷ್ಟು ಹಾನಿಗೊಳಗಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಬದಿಯ ಮಣ್ಣು ಕುಸಿತ ತಡೆಯುವ ಕ್ರಮ ಕೈಗೊಳ್ಳಬೇಕು ಹಾಗೂ ರಸ್ತೆ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು