ಭಾರೀ ಮಳೆಯ ಮುನ್ಸೂಚನೆ ದ.ಕ ಜಿಲ್ಲೆಯ – ಕಾಲೇಜುಗಳಿಗೆ ರಜೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ (PU) ಕಾಲೇಜುಗಳಿಗೆ ಜುಲೈ 18ರ ಶನಿವಾರದಂದು ರಜೆ ಇರಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ (DC) ದರ್ಶನ್ ಎಚ್.ವಿ. ಅವರು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು