ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿದ್ಯಾರ್ಥಿಯ ಬಳಿ ಲಂಚ ಕೇಳಿದ ಪ್ರಿನ್ಸಿಪಾಲ್ – ಲೋಕಾಯುಕ್ತ ಬಲೆಗೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ವಿದ್ಯಾರ್ಥಿಯ ಬಳಿ ಲಂಚ ಕೇಳಿದ ಪ್ರಿನ್ಸಿಪಾಲ್ – ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ದಾಖಲಿಸಿಕೊಳ್ಳಲು ಆಕೆಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆಯ ಪ್ರಿನ್ಸಿಪಾಲ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ (shivamogga) ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.

ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ (Kittur Rani Channamma Residential School) ಪ್ರಿನ್ಸಿಪಾಲ್ ನಾಮದೇವ ಬಂಧಿತ ಆರೋಪಿಯಾಗಿದ್ದಾರೆ.  ಬಾಲಕಿಯೊಬ್ಬಳನ್ನು 7ನೇ ತರಗತಿಗೆ ಈ ವಸತಿ ಶಾಲೆಗೆ ಸೇರಿಸಲು ಪೋಷಕರು ಮುಂದಾಗಿದ್ದರು. ಆದರೆ, ಅಡ್ಮಿಷನ್ ಮಾಡಿಕೊಡಲು ಪ್ರಿನ್ಸಿಪಾಲ್ ನಾಮದೇವ ಅವರು ₹20,000 ಹಣ ನೀಡುವಂತೆ ಪೋಷಕರಿಗೆ ಒತ್ತಾಯಿಸಿದ್ದರು. ಶಾಲೆಗೆ ‘ಡ್ರಮ್ ಸೆಟ್’ ಖರೀದಿಸಬೇಕಿದೆ ಎಂಬ ನೆಪವೊಡ್ಡಿ ಅವರು ಈ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ಪ್ರಿನ್ಸಿಪಾಲ್ ನಡೆಯಿಂದ ಬೇಸತ್ತ ಬಾಲಕಿಯ ಪೋಷಕರು ಈ ಕುರಿತು ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ಜುಲೈ 20ರ ಸೋಮವಾರದಂದು ನಿಗದಿಪಡಿಸಿದಂತೆ ಮೊದಲ ಕಂತಿನ ರೂಪದಲ್ಲಿ ₹10,000 ಲಂಚದ ಹಣವನ್ನು ಪೋಷಕರಿಂದ ಪ್ರಿನ್ಸಿಪಾಲ್  ಸ್ವೀಕರಿಸುತ್ತಿದ್ದ. ಈ ವೇಳೆ ಹೊಂಚು ಹಾಕಿದ್ದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಹಣದ ಸಮೇತ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್‌ಪೆಕ್ಟರ್‌ ರುದ್ರೇಶ್ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು.

ಆರೋಪಿ ಪ್ರಿನ್ಸಿಪಾಲ್ ನಾಮದೇವ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು