ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಕ್ಕಳನ್ನು ಪ್ರಚೋದಿಸಬೇಡಿ, ಅವರಿಗೆ ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಕರೆ

PPeepal Media

Peepal Media ದೇಶ

• 1 ನಿಮಿಷದ ಓದು

ಮಕ್ಕಳನ್ನು ಪ್ರಚೋದಿಸಬೇಡಿ, ಅವರಿಗೆ ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಕರೆ

ಇತ್ತೀಚೆಗೆ ದೇಶಾದ್ಯಂತ ಸದ್ದು ಮಾಡಿದ್ದ ‘ನೀಟ್ ಯುಜಿ’ (NEET UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್ ಬಳಿ ಕಾಕ್ರೋಚ್ ಜನತಾ ಪಾರ್ಟಿಯ ಕಾರ್ಯಕರ್ತರು ಬೃಹತ್ ಧರಣಿ ನಡೆಸಿದ್ದರು.

ಸೋಮವಾರ ನಡೆದ ‘ಸಂಸತ್ ಚಲೋ’ ಪಾದಯಾತ್ರೆಯೂ ತೀವ್ರ ಉದ್ವಿಗ್ನತೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯದ ಕುರಿತು ಪ್ರತಿಕ್ರಿಯಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿರುವ ಅವರು, ಇಂತಹ ಅಕ್ರಮಗಳು ಮರುಕಳಿಸದಂತೆ ನೋಡಿಕೊಳ್ಳುವುದು ದೇಶದ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಮಂಗಳವಾರ ಎನ್‌ಡಿಎ ಎಂಪಿಗಳೊಂದಿಗೆ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆದ ‘ಮಂಗಲ್ ಮಿಲನ್’ ಸಭೆಯಲ್ಲಿ ಪ್ರಧಾನಿ ಈ ಮಾತುಗಳನ್ನಾಡಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ದೋಷರಹಿತ ಪರೀಕ್ಷಾ ವ್ಯವಸ್ಥೆಯನ್ನು ನಿರ್ಮಿಸಲು ಪ್ರತಿಯೊಬ್ಬರೂ ಸಹಕರಿಸಬೇಕೆಂದು ಮೋದಿ ಕೋರಿದ್ದಾರೆ ಎಂದು ರಿಜಿಜು ಹೇಳಿದರು.

ನೀಟ್ ಮರುಪರೀಕ್ಷೆಗೆ (NEET Re-exam) ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮಕ್ಕಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಫಲಿತಾಂಶಗಳನ್ನು ಸಹ ವಿಳಂಬವಿಲ್ಲದೆ ಬಿಡುಗಡೆ ಮಾಡಲಾಗಿದೆ ಎಂದು ಮೋದಿ ತಿಳಿಸಿರುವುದಾಗಿ ರಿಜಿಜು ವಿವರಿಸಿದರು. ನೀಟ್ ಪೇಪರ್ ಲೀಕ್ ವಿಚಾರದಲ್ಲಿ ಸರ್ಕಾರ ತಕ್ಷಣವೇ ಸ್ಪಂದಿಸಿದ್ದು, ಈ ಪ್ರಕರಣದಲ್ಲಿ ಈಗಾಗಲೇ 13 ಜನರನ್ನು ಬಂಧಿಸಲಾಗಿದೆ ಎಂದು ಸಚಿವರು ಹೇಳಿದರು.

ಭವಿಷ್ಯದಲ್ಲಿ ಇಂತಹ ಅಕ್ರಮಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ತಪ್ಪಿತಸ್ಥರನ್ನು ಜೈಲಿಗಟ್ಟಲಾಗಿದೆ ಎಂದರು. ಯುವಜನರ ಭವಿಷ್ಯದ ಜೊತೆ ಆಟವಾಡುವವರಿಗೆ ಕಠಿಣ ಶಿಕ್ಷೆ ಖಚಿತ ಎಂದು ಪ್ರಧಾನಿ ಎಚ್ಚರಿಸಿದ್ದಾರೆ.

ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯಲು ಎನ್‌ಡಿಎ ಪಾಲುದಾರರು ಒಗ್ಗಟ್ಟಿನಿಂದಿರಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ದೇಶದ ಭವಿಷ್ಯ ಮತ್ತು ಯುವಜನರ ಕಲ್ಯಾಣಕ್ಕಾಗಿ ಸಂಸದರೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಮೋದಿ ಹೇಳಿದರು.

“ಸಣ್ಣ ಮಕ್ಕಳನ್ನು ಪ್ರಚೋದಿಸಬೇಡಿ. ಅವರಿಗೆ ಸರಿಯಾದ ಮಾರ್ಗವನ್ನು ತೋರಿಸಿ,” ಎಂದ ಪ್ರಧಾನಿ, ತಪ್ಪುದಾರಿಯಲ್ಲಿ ಹೋಗುವುದು ಸುಲಭ, ಆದರೆ ಮತ್ತೆ ಸರಿಯಾದ ಹಾದಿಗೆ ಮರಳುವುದು ತಡವಾಗುತ್ತದೆ ಎಂದರು. ವಿದ್ಯಾರ್ಥಿಗಳನ್ನು ನಲ್ಮೆ ಮತ್ತು ಸರಿಯಾದ ಮಾರ್ಗದಲ್ಲಿ ನಡೆಸುವ ಜವಾಬ್ದಾರಿ ನಮ್ಮ ಮೇಲೆಯೇ ಇದೆ ಎಂದು ಪ್ರತಿಪಾದಿಸಿದರು. ಯುವಕರನ್ನು ತಪ್ಪುದಾರಿಗೆ ಎಳೆಯಲಾಗುತ್ತಿದ್ದು, ಅವರನ್ನು ಪ್ರಚೋದಿಸದೆ ಸೂಕ್ತ ಮಾರ್ಗದರ್ಶನ ನೀಡುವ ವಿಷಯವನ್ನು ಪ್ರಧಾನಿ ಪ್ರಸ್ತಾಪಿಸಿದ್ದಾರೆ ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು