ಕೈ ನಿಷ್ಠಾವಂತರಿಗೆ ನಿರಾಸೆ, ಪಕ್ಷ ವಿರೋಧಿಗಳಿಗೆ ಸಚಿವ ಸ್ಥಾನ – ತನ್ವೀರ್ ಸೇಠ್ ಅಸಮಾಧಾನ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿರುವ ಅವರು, ಪಕ್ಷಕ್ಕೆ ನಿಷ್ಠೆಯಿಂದ ದುಡಿದವರಿಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಕೈತಪ್ಪಿರುವುದು ನಿರಾಸೆ ತಂದಿದೆ. ಮೈಸೂರು ಭಾಗಕ್ಕೆ ಸಚಿವ ಸಂಪುಟದಲ್ಲಿ ಸಿಗಬೇಕಿದ್ದ ಪ್ರಾತಿನಿಧ್ಯ ದೊರೆತಿಲ್ಲ. ಈ ಪಟ್ಟಿ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂದು ಹೇಳಿದರು.

ಇದೇ ವೇಳೆ ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿದ ಅವರು, ಪಕ್ಷದ ನಾಯಕರಿಗೆ ಸವಾಲು ಹಾಕಿದವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ, ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಲ್ಲ. ಯಾವ ಮಾನದಂಡದ ಆಧಾರದ ಮೇಲೆ ಸಚಿವ ಸಂಪುಟ ರಚನೆ ಮಾಡಲಾಗಿದೆ ಎಂಬುದು ಅರ್ಥವಾಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು