ಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ – ಇಬ್ಬರ ದುರ್ಮರಣ

ಚಾಮರಾಜನಗರ : ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಖಾನೆ ಸಮೀಪ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಭೀಕರ ಹಿಟ್‌ ಆಂಡ್‌ ರನ್‌ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದ ಯುವರಾಜ್ (50) ಹಾಗೂ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೋಡಳ್ಳಿ ಗ್ರಾಮದ ಶಶಾಂಕ್ (25) ಎಂದು ಗುರುತಿಸಲಾಗಿದೆ. ಮೃತರು ವಡೆಕಹಳ್ಳಿ ಗ್ರಾಮದ ಕಡೆಯಿಂದ ಕೌದಳ್ಳಿ ಕಡೆಗೆ ಟಿ.ವಿ.ಎಸ್. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಘಟನೆ ಹಿಟ್‌ ಆಂಡ್‌ ರನ್‌ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ರಾಮಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಚಿಕ್ಕರಾಜಶೆಟ್ಟಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು