ಹಾಸನ ಲಂಚ ಪಡೆಯುವ ವೇಳಯ ಪಿಎಸ್‌ಐ ಮಂಜುನಾಥ್  – ಲೋಕಾಯುಕ್ತ ಬಲೆಗೆ

ಹಾಸನ: ಎನ್‌ಸಿಆರ್‌ ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಎನ್‌ಸಿಆರ್ ಇತ್ಯರ್ಥಪಡಿಸಲು ನವೀನ್ ಎಂಬುವವರ ಬಳಿ ಪಿಎಸ್‌ಐ ಮಂಜುನಾಥ್ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಮುಂಗಡವಾಗಿ ₹20 ಸಾವಿರ ನೀಡುವಂತೆ ಸೂಚಿಸಿದ್ದರು. ಇಂದು ಹೋಟೆಲ್‌ವೊಂದರಲ್ಲಿ ₹20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪಿಎಸ್‌ಐ ಮಂಜುನಾಥ್ ಅವರನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ ಹಾಗೂ ಗವಿರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

Related Articles

ಇತ್ತೀಚಿನ ಸುದ್ದಿಗಳು