ರೇಷನ್‌ ಕಾರ್ಡ್‌ನ ಕುಟುಂಬದ ಪ್ರತಿಯೊಬ್ಬ ಸದಸ್ಯರು e-KYC ಕಡ್ಡಾಯ

ಬೆಂಗಳೂರು: ರಾಜ್ಯದ ರೇಷನ್‌ ಕಾರ್ಡ್‌ದಾರರಿಗೆ ಸರ್ಕಾರದಿಂದ ಮಹತ್ವದ ಸೂಚನೆ ಹೊರಬಿದ್ದಿದೆ. ರೇಷನ್‌ ಕಾರ್ಡ್‌ನಲ್ಲಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯರು e-KYC ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ನಿಗದಿತ ಅವಧಿಯಲ್ಲಿ e-KYC ಪೂರ್ಣಗೊಳಿಸದಿದ್ದರೆ ಕಾರ್ಡ್‌ನಿಂದ ಹೆಸರು ಡಿಲೀಟ್‌ ಆಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಒಟ್ಟು 2.67 ಕೋಟಿ ರೇಷನ್‌ ಕಾರ್ಡ್‌ಗಳಿದ್ದು, ಈವರೆಗೆ ಕೇವಲ 26.03 ಲಕ್ಷ ಕಾರ್ಡ್‌ಗಳಲ್ಲಿ ಮಾತ್ರ e-KYC ಪೂರ್ಣಗೊಂಡಿದೆ. ಇದು ಶೇ.9.73ರಷ್ಟಾಗಿದೆ. ರೇಷನ್‌ ಕಾರ್ಡ್‌ನಲ್ಲಿರುವ ಕುಟುಂಬದ ಎಲ್ಲ ಸದಸ್ಯರು ನ್ಯಾಯಬೆಲೆ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ಮೂಲಕ e-KYC ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ. ಸೆಪ್ಟೆಂಬರ್‌ವರೆಗೆ e-KYC ಮಾಡಲು ಅವಕಾಶ ನೀಡಲಾಗಿದೆ. ನಿಗದಿತ ಅವಧಿಯಲ್ಲಿ e-KYC ಮಾಡಿಸದಿದ್ದರೆ ರೇಷನ್‌ ಕಾರ್ಡ್‌ನಲ್ಲಿರುವ ಹೆಸರು ಡಿಲೀಟ್‌ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.

ಇದೇ ವೇಳೆ ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಗೆ ಆಹಾರ ಇಲಾಖೆಯಿಂದ ಫಲಾನುಭವಿಗಳ ಮಾಹಿತಿಯನ್ನು ಪಡೆಯುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಹೀಗಾಗಿ ರೇಷನ್‌ ಕಾರ್ಡ್‌ನ e-KYC ಪ್ರಕ್ರಿಯೆ ಪೂರ್ಣಗೊಳಿಸುವುದು ಫಲಾನುಭವಿಗಳಿಗೆ ಮಹತ್ವದ್ದಾಗಿದೆ.

Related Articles

ಇತ್ತೀಚಿನ ಸುದ್ದಿಗಳು